ಹುಬ್ಬಳ್ಳಿ : ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡುವಂತ ಪರಿಸ್ಥಿತಿ ಎದುರಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.

ಬೀದಿ ನಾಯಿಗಳ ಹಾವಳಿ : ಬೆಚ್ಚಿ ಬಿದ್ದಿ ಹುಬ್ಬಳ್ಳಿ ಜನ
ನಗರದ ಕೊಪ್ಪಿಕರ ರಸ್ತೆಯಲ್ಲಿ ಇಬ್ಬರು ಯುವಕರ ಮೇಲೆ ಬೀದಿ ನಾಯಿ ಅಟ್ಯಾಕ್ ಮಾಡಿದೆ. ಬೀದಿ ನಾಯಿ ಅಟ್ಯಾಕ್ ಮಾಡೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ ಬೆಳಗಿನ ಜಾವ ಇಬ್ಬರು ಯುವಕರನ್ನು ಬೆನ್ನು ಬಿದ್ದು ಬೀದಿ ನಾಯಿ ಅಟ್ಯಾಕ್ ಮಾಡಿದೆ. ನಾಯಿ ದಾಳಿಯಿಂದ ಬೆಚ್ಚಿ ಬಿದ್ದ ಯವಕರು ತಪ್ಪಿಸಿಕೊಳ್ಳಲು ಯತ್ನಿಸಿದರು ಬೀದಿ ನಾಯಿ ಅಟ್ಯಾಕ್ ಮಾಡಿ ಕಚ್ಚಿದೆ.

ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕರು ಕೆಳಗೆ ಬಿದ್ದಿರೋ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾರದಲ್ಲಿ ಒಂದು ಕಡೆಯಾದರೂ ನಾಯಿಗಳ ಉಪಟಳದಿಂದ ನಾಗರಿಕರು ಬೇಸತ್ತ ಬಗ್ಗೆ, ಗಾಯಗೊಂಡ ಬಗ್ಗೆ, ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಗಳು ಬರುತ್ತಲೆ ಇವೆ.




