BATTER & WICKET KEEPER SANJU SAMSON: NZ v/s IND: 2ನೇ ODIನಲ್ಲಿ ಬ್ಯಾಟರ್ ಸಂಜು ಸ್ಯಾಮ್ಸನ್‌ ಕೈಬಿಟ್ಟಿದ್ದಕ್ಕೆ ಅಭಿಮಾನಿಗಳು ಆಕ್ರೋಶ

ಬೆಂಗಳೂರು : ಟೀಂ ಇಂಡಿಯಾದ ಯುವ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಅವರನ್ನ ನ್ಯೂಜಿ಼ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ಕೈಬಿಟ್ಟ ಬಗ್ಗೆ ಸಂಜು ಸ್ಯಾಮ್ಸನ್‌ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಕಿವೀಸ್‌ ಅಂಗಳದಲ್ಲಿ ನಡೆಯುತ್ತಿರುವ ನ್ಯೂಜಿ಼ಲೆಂಡ್‌ ವಿರುದ್ಧದ ODI ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಸಂಜು ಸ್ಯಾಮ್ಸನ್‌, ಫ್ಯಾನ್ಸ್‌ಗಳ ನಿರೀಕ್ಷೆಯಂತೆ ಮೊದಲ ಏಕದಿನ ಪಂದ್ಯದಲ್ಲಿ ತಂಡದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆದಿದ್ದರು. ಅಲ್ಲದೇ ಆಕ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ ಸಂಜು, 38 ಬಾಲ್‌ಗಳಲ್ಲಿ 36 ರನ್‌ಗಳ ಉಪಯುಕ್ತ ರನ್‌ಗಳಿಸಿದ್ದರು.
ಆದರೆ ಭಾನುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಕೆಲವು ಬದಲಾವಣೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್‌ ಅವರನ್ನ ತಂಡದಿಂದ ಕೈಬಿಡಲಾಗಿತ್ತು.

ತಂಡದ ಆಯ್ಕೆ ಕುರಿತ ಈ ನಿರ್ಧಾರದ ಬಗ್ಗೆ ಸಂಜು ಸ್ಯಾಮ್ಸನ್‌ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅಲ್ಲದೇ ದುಬೈನಲ್ಲಿ ನಡೆಯುತ್ತಿರುವ ಫಿಫಾ ಫುಟ್ಬಾಲ್‌ ವಿಶ್ವಕಪ್‌ನಲ್ಲೂ ಸಹ ಕೆಲವು ಅಭಿಮಾನಿಗಳು ಸಂಜೂ ಸ್ಯಾಮ್ಸನ್‌ ಅವರ ಭಾವಚಿತ್ರವನ್ನ ಪ್ರದರ್ಶಿಸಿ, ಸಂಜು ಸ್ಯಾಮ್ಸನ್‌ ಅವರನ್ನ ಬೆಂಬಲಿಸುವುದಾಗಿ ಹೇಳಿರುವ ಫೋಟೋ ಸಹ ಎಲ್ಲೆಡೆ ವೈರಲ್‌ ಆಗಿದೆ.

ಐಪಿಎಲ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಮೂಲಕ ಮಿಂಚಿರುವ ಕೇರಳ ಮೂಲದ ಸಂಜು ಸ್ಯಾಮ್ಸನ್‌ 2015ರಲ್ಲೇ ಟೀಂ ಇಂಡಿಯಾಕ್ಕೆ ಆಯ್ಕೆ ಆಗಿದ್ದರೂ, ಸತತವಾಗಿ ಅವರಿಗೆ ತಂಡದಲ್ಲಿ ಸ್ಥಾನ ದೊರೆಯುತ್ತಿಲ್ಲ. ತಂಡದಲ್ಲಿ ಆಗೊಮ್ಮೆ ಈಗೊಮ್ಮೆ ಸ್ಥಾನ ಪಡೆದರೂ, ಪ್ಲೇಯಿಂಗ್‌ ಇಲವೆನ್‌ನಲ್ಲಿ ಅವಕಾಶ ಸಿಗದಿರುವುದು ಸಂಜು ಸ್ಯಾಮ್ಸನ್‌ ಹಾಗೂ ಕ್ರಿಕೆಟ್‌ ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದೆ.
ನ್ಯೂಜಿ಼ಲೆಂಡ್‌ ಪ್ರವಾಸದಲ್ಲಿ ಟೀಂ ಇಂಡಿಯಾ ಉಪನಾಯಕನ ಸ್ಥಾನ ಹೊತ್ತಿರುವ ರಿಷಬ್‌ ಪಂತ್‌ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿದ್ದರು, ಅವರನ್ನ ತಂಡದಲ್ಲಿ ಕೈಬಿಡದೆ ಸಂಜು ಸ್ಯಾಮ್ಸನ್‌ ಅವರನ್ನ ತಂಡದ ಪ್ಲೇಯಿಂಗ್‌ ಇಲವೆನ್‌ನಿಂದ ಕೈಬಿಟ್ಟಿರುವ ಬಗ್ಗೆಯೂ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ.

#SANJUSAMSON #CRICKTER #FIFAWORLD CUP #FANS #NEWZLAND #TEAM INDIA #DROPPED #SECOND ONEDAY MATCH RISHAB PANTH

More News