ಜೆಡಿಎಸ್ ಮತ್ತೊಬ್ಬ ಶಾಸಕರಿಂದ ಕೆಪಿಸಿಸಿ ಅಧ್ಯಕ್ಷರ ಭೇಟಿ, ಮಹತ್ವದ ಮಾತುಕತೆ

ಬೆಂಗಳೂರು : ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಒಂದು ಮೈಸೂರು ಶಾಸಕ ಜಿ ಟಿ ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಇದರ ನಡುವೆ ಇಂದು  ಕೋಲಾರ ಜೆಡಿಎಸ್ ಶಾಸಕ ಕೆ. ಶ್ರೀನಿವಾಸಗೌಡ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು.  

ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.ಈ ಸಂಬಂಧ ಸ್ಪಷ್ಟವಾದ ಮಾಹಿತಿಯನ್ನು ಉಭಯ ನಾಯಕರು ನೀಡಿಲ್ಲವಾದರೂ, ಭೇಟಿ ಮಹತ್ವ ಪಡೆದುಕೊಂಡಿದೆ.

ಈ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಶ್ರೀನಿವಾಸ್ ವಿರುದ್ಧ ಪಕ್ಷ ವಿರೋಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಶಿಸ್ತು ಕ್ರಮವನ್ನು ಶೀಘ್ರದಲ್ಲೇ ಹೆಚ್ ಡಿ ಕುಮಾರಸ್ವಾಮಿ ಅವರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರ ಶಿವಕುಮಾರ್ ಭೇಟಿ ಮಹತ್ವ ಪಡೆದುಕೊಂಡಿದೆ.

More News