Leopard Sighting in Bangalore : ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಹೆಚ್ಚಿದ ಆತಂಕ!  

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ನಗರದಲ್ಲಿರುವ ಐಟಿಸಿ ಕಾರ್ಖಾನೆ ಆವರಣದಲ್ಲಿ ಎರಡು ದಿನದಿಂದ ಚಿರತೆ ಓಡಾಡ ನಡೆಸುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಇಂದೂ ಕೂಡ ಚೀತಾ ಕೂಂಬಿಂಗ್ ಮುಂದುವರೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಬಳಿಯ ಇರುವ ಸಿಗರೇಟ್ ಪಿಲ್ಟರ್ ಉತ್ಪಾದನಾ ಘಟಕದ (ಐಟಿಸಿ) ಪ್ಯಾಕ್ಟರಿ ಆವರಣದಲ್ಲಿ ಚಿರತೆ ಸೆರೆಗಾಗಿ ಎರಡು ವಿಶೇಷ ತಂಡಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತರಬನಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ  ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ.

ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತರಬನಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

More News