ಮುಂಬೈ: ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಅವರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ನಿನ್ನೆ ತಪಾಸಣೆ ನಡೆಸಿದ್ದಾರೆ.
ಸೂದ್ ಅವರ ಮುಂಬೈನಲ್ಲಿನ ಮನೆ ಹಾಗೆಯೇ ಲಖನೌದಲ್ಲಿನ ಅವರ ಕಚೇರಿಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಸೋನು ಸೂದ್ ಅವರು ಕಟ್ಟಬೇಕಾಗಿರುವ ತೆರಿಗೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯ ಅರವಿಂದ ಕ್ರೇಜಿವಾಲ್ ನೇತೃತ್ವದ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ದೇಶ್ ಕಿ ಮೆಂಟರ್ ಕಾರ್ಯಕ್ರಮದ ರಾಯಭಾರಿಯನ್ನಾಗಿ ಮಾಡಿತ್ತು. ಹಾಗೆಯೇ ಸೂದ್ ಅವರು ಎಎಪಿ ಪಕ್ಷ ಸೇರಲಿದ್ದಾರೆ ಎಂದವದಂತಿಯ ಹಿನ್ನೆಲೆಯಲ್ಲಿ ದಾಳಿ ನಡೆದಿವೆ ಎಂಬ ವದಂತಿಗಳು ಕೇಳಿಬರುತ್ತಿವೆ.