ಬೆಂಗಳೂರು: ಬಿಜೆಪಿ ಎಂಎಲ್ ಸಿ ಹೆಚ್,ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ. ಇಂದು ಬೆಂಗಳೂರಿನ ಸದಾಶಿವನಗರದಲ್ಲಿರೋ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ಹೆಚ್.ವಿಶ್ವನಾಥ್ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದರು. ಖರ್ಗೆ ಅವ್ರು ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿ ತಮ್ಮನ್ನು ಭೇಟಿಯಾಗುವಂತೆ ಸೂಚಿಸಿದ್ದರು.
ಈ ಹಿನ್ನೆಲೆಯಲ್ಲಿ ವಿಶ್ವನಾಥ್ ಅವ್ರು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆಶಿ ಜೊತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನದಲ್ಲಿ ಹೆಚ್,ವಿಶ್ವನಾಥ್ ಅವ್ರ ಪಾತ್ರ ಕೂಡ ಇತ್ತು.

ಸಚಿವರಾಗೋ ಕನಸು ಹೊತ್ತು ಬಿಜೆಪಿ ಸೇರಿದ್ದ ವಿಶ್ವನಾಥ್ ಅವರಿಗೆ ತಾವು ಅಂದುಕೊಂಡ ಹಾಗೆ ಪಕ್ಷ ನನಗೆ ನಡೆಸಿಕೊಂಡಿಲ್ಲಾ ಅನ್ನೋದನ್ನು ಬಹಿರಂಗವಾಗಿಯೇ ಅನೇಕ ಸಲ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಪುತ್ರನ ರಾಜಕೀಯ ಭವಿಷ್ಯಕ್ಕಾಗಿಯೂ ಕೂಡ ಮತ್ತೆ ಹೆಚ್.ವಿಶ್ವನಾಥ್ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಆದ್ರೆ ಯಾವಾಗ ಕಾಂಗ್ರೆಸ್ ಸೇರುತ್ತಾರೆ ಅನ್ನೋದು ಕೆಲವೇ ದಿನಗಳಲ್ಲಿ ಬಹಿರಂಗವಾಗಲಿದೆ.
@h vishwanath @dkshivakumar @kpcc @aicc @mallikarjuna kharge #joining bjp #discussion #@bjp @mlc #verysoon @siddaramaiah




