The Election Commission Stoped the Collection of Voter Information: ಖಾಸಗಿ ಸಂಸ್ಥೆಗಳಿಂದ ಮತದಾರರ ಮಾಹಿತಿ ಸಂಗ್ರಹಕ್ಕೆ ಚುನಾವಣಾ ಆಯೋಗ ಬ್ರೇಕ್ ..!

ಬೆಂಗಳೂರು : ಡಿ.17 : ರಾಜ್ಯದಲ್ಲಿ ಯಾವುದೇ ಖಾಸಗಿ ಸಂಸ್ಥೆಗಳು ಇನ್ನು ಮುಂದೆ ಮತದಾರರ ಮಾಹಿತಿ ಸಂಗ್ರಹಿಸದಂತೆ ಕ್ರಮಕೈಗೊಳ್ಳುವಂತೆ ಭಾರತ ಚುನಾವಣಾ ಆಯೋಗ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಮನೋಜ್ ಕುಮಾರ್ ಮೀನಾ ಅವರು ಈ ಸಂಬಂಧ ಎಲ್ಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಖಾಸಗಿ ಸಂಸ್ಥೆಗಳು ಮನೆ-ಮನೆ ಸಮೀಕ್ಷೆ ಅಥವಾ ನಕಲಿ ಗುರುತಿನ ಚೀಟಿಗಳ ಮೂಲಕ ಮಾಹಿತಿ ಸಂಗ್ರಹಿಸುವ ಯಾವುದೇ ಪ್ರಯತ್ನವನ್ನು ಅನುಮತಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಯಾವುದೇ ಖಾಸಗಿ ಸಂಸ್ಥೆಗಳಿಗೆ ಡಿಇಒಗಳು ಅಥವಾ ಇಆರ್ ಒಗಳಿಂದ ದೃಢೀಕರಣ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರ ಎನ್ ಒಸಿ ನೀಡುವ ಮೂಲಕ ಮತದಾರರ ಡೇಟಾ ಸಂಗ್ರಹಣೆಯನ್ನ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳು ಮತದಾರರ ಮನೆಗಳಿಗೆ ತೆರಳಿ ಅರ್ಜಿಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿ ಕೇಳುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು  ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳ ಮತದಾರರ ಮಾಹಿತಿ ಸಂಗ್ರಹಣೆ ಮಾಡುವುದರ ಮೇಲೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

More News