ಬಾಗಲಕೋಟೆ: ಕಮಿಷನ್ ಆರೋಪದಡಿಯಲ್ಲಿ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದು, ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಿಂದ ದೂರವಿರಲು ನಿರ್ಧರಿಸಿದ್ದಾರೆ.
ಸಂಪುಟ ವಿಸ್ತರಣೆ ಮಾಡಿ ತಮ್ಮನ್ನು ಸೇರಿಸಿಕೊಳ್ಳಬೇಕೆಂದು ಅವರು ಸರ್ಕಾರದ ವಿರುದ್ಧ ಸಾಕಷ್ಟು ಒತ್ತಡ ಹೇರಿದ್ದರು. ಆದರೆ, ಈ ಒತ್ತಡಕ್ಕೆ ಮಣಿಯದ ಸಿಎಂ, ಸಂಪುಟ ವಿಸ್ತರಣೆ ಮಾಡಿರಲಿಲ್ಲ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿಲ್ಲ ಎನ್ನುವುದು ಅವರ ವಾದ.
ಆದರೆ, ಅಧಿವೇಶನದಿಂದ ದೂವುಳಿದ ಈಶ್ವರಪ್ಪ, ಪ್ರತಿಭಟನೆಗೆ ಮುಂದಾಗಿದ್ದಾರೆ. ಸಚಿವ ಸ್ಥಾನಕ್ಕಾಗಿ ಸೌಜನ್ಯ ಪ್ರತಿಭಟನೆ ಇದಾಗಿದೆ ಎನ್ನುವುದು ಕೆಎಸ್ ಈಶ್ವರಪ್ಪರವರ ವಾದವಾಗಿದೆ.

ಪ್ರಕರಣದಿಂದ ಕ್ಲೀನ್ ಚೀಟ್ ಸಿಕ್ಕಿದ್ರೂ ಕೂಡ ಸಂಪುಟಕ್ಕೆ ಸೇರಿಸಿಕೊಳ್ಳದ ಸಿಎಂ ವಿರುದ್ಧ ಅವರು ಅಸಮಾಧಾನ ಹೊರಹಾಕಿದರು. ಯಾಕೆ ನನ್ನ ಸಂಪುಟಕ್ಕೆ ಸೇರಿಸಿಕೊಳ್ಳುತ್ತಿಲ್ಲ ಎಂದು ನೇರವಾಗಿ ಪ್ರಶ್ನಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಗೈರು ಉಳಿಯುವ ಮೂಲಕ ಹೈ ಕಮಾಂಡ್ ಗಮನ ಸೆಳೆಯಲು ರೆಡಿಯಾಗಿದ್ದಾರೆ.

ನಾಡಿನ ಮಠಾಧೀಶರು ಸೇರಿದಂತೆ ಎಲ್ಲರೂ ನನ್ನ ಯಾಕೆ ಸಂಪುಟಕ್ಕೆ ಸೇರ್ಪಡೆ ಮಾಡಿಲ್ಲ ಎಂದು ಕೇಳುತ್ತಿದ್ದಾರೆ. ಇದಕ್ಕೆ ಉತ್ತರಿಸುವುದಕ್ಕಾಗಿ ನಾನು ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ಅವರು ತಿಳಿಸಿದರು.
#KSESHWARAPPA #DEMAND FOR MINISTER POST #CM BASAVARAJ BOMMAI #HIGHCOMMAND #SESSION #BELAGAVI




