ಬೆಂಗಳೂರು : ಸಮಾಜಕಲ್ಯಾಣ ಇಲಾಖೆಯಲ್ಲಿ ಇನ್ನು ಮುಂದೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ದಂಧೆಗೆ ಬ್ರೇಕ್ ಹಾಕಲು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಿರ್ಧರಿಸಿದ್ದು, ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಇಲಾಖಾ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ಬಳಿಕವೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವರ್ಗಾವಣೆಗೆ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ಇಲಾಖೆಯಲ್ಲಿ ಪಾರದರ್ಶಕತೆ ತರಲು ಈ ಕಠಿಣ ನಿರ್ಧಾರದತ್ತ ದಿಟ್ಟ ಹೆಜ್ಜೆ ಇಡಲಾಗುವುದು ಎಂದರು.
ಎಲ್ಲಾ ವರ್ಗಾವಣೆ ಗಳು ಕೌನ್ಸಿಲಿಂಗ್ ಮೂಲಕವೇ ನಡೆಯಬೇಕು, ಮಾರಣಾಂತಿಕ ಕಾಯಿಲೆ, ಪತಿ ಪತ್ನಿ, ವಿಧವೆ ಮತ್ತು ವಿಕಲಚೇತನರ ವರ್ಗಾವಣೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.




