ಬೆಂಗಳೂರು :ಡಿ.26 : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣದಿಂದ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ರೋಗ ತಡೆಯುವ ಉದ್ದೇಶದಿಂದ ನಮ್ಮ ರಾಜ್ಯದಲ್ಲೂ ಕೆಲವು ಮಾರ್ಗ ಸೂಚಿಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್.
ರಾಜ್ಯದಲ್ಲಿ ಅನುಸರಿಸುವ ಮಾರ್ಗ ಸೂಚಿಗೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಮತ್ತು ಕಂದಾಯ ಸಚಿವ ಆರ್.ಆಶೋಕ ಹೊಸ ನಿಯಮಗಳ ಬಗ್ಗೆ ವಿವರಿಸಿದರು.

ಜನ ದಟ್ಟಣೆ ಪ್ರದೇಶಗಳಾದ ‘ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಹೊಸ ವರ್ಷ ಆಚರಿಸುವ ವೇಳೆ ಮಾಸ್ಕ್ ಧರಿಸಿರಲೇಬೇಕು. ಹೊಸ ವರ್ಷದ ಆಚರಣೆಗಳು ರಾತ್ರಿ 1ರ ಒಳಗೇ ಅಂತ್ಯವಾಗಬೇಕು. ಯಾರೂ ಭಯಪಡುವ ಅವಶ್ಯಕತೆ ಇಲ್ಲ.. ಆದ್ರೆ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಸುಧಾಕರ್ ಹೇಳಿದರು.
‘ಆಚರಣೆಗಳು ನಡೆಯುವ ಸ್ಥಳಗಳಲ್ಲಿ ಅನುಮತಿಸಲಾದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಇರಬಾರದು’ಎಂದು ಅವರು ತಿಳಿಸಿದರು.




