P M Modi’s Brother’s Car Accident : ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!

ಮೈಸೂರು : ಡಿ.27: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದೆ. ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಹ್ಲಾದ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

More News