4 Terrorists Encounter : ನಾಲ್ವರು ಉಗ್ರರ ಎನ್ಕೌಂಟರ್

ಜಮ್ಮು : ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ನಾಲ್ವರು ಉಗ್ರರನ್ನ

ಎನ್ಕೌಂಟರ್ ಮಾಡಿದ್ದಾರೆ. ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಎಜಿಡಿಪಿ ಮುಕೇಶ್ ಸಿಂಗ್ ಅವರು, ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಿ, ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತ್ತಿತು.

ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಇದರಂತೆ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

More News