ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ಮಹಿಳೆ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ತನ್ನಿ ಎಂದು ನಟಿ ಕಂಗನಾ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ 20 ವರ್ಷದ ನಟಿ ತುನಿಷಾ ಶರ್ಮಾ ಶೂಟಿಂಗ್ ಸೆಟ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಳಿಕ ಆಕೆಯ ಬಾಯ್‌ಫ್ರೆಂಡ್ ಶೀಜಾನ್ ಖಾನ್ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಈ ಕುರಿತು ಬೇಸರ ವ್ಯಕ್ತಿ ಪಡಿಸಿ ಟ್ವೀಟ್ ಮಾಡಿರುವ ನಟಿ ಕಂಗನಾ, ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡಿ ಎಂದು ಪ್ರಧಾನಿ ಮೋದಿ ಗೆ ಮನವಿ ಮಾಡಿದ್ದಾರೆ.


ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಬೇಸರ ವ್ಯಕ್ತಿ ಪಡಿಸಿ ಬರೆದುಕೊಂಡಿರುವ ನಟಿ ಕಂಗನಾ ರಣಾವತ್, ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ.. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ನಾನು ಗೌರವಾನ್ವಿತ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ. ಕೃಷ್ಣ ದ್ರೌಪದಿಗೆ ಸಹಾಯ ಮಾಡಿದಂತೆ, ನಾವು ನಿಮ್ಮಲ್ಲಿ ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡುತ್ತೀರಿ ಎಂದು ನಿರೀಕ್ಷೆ ಇಟ್ಟಿದ್ದೀವಿ.

ಮಹಿಳೆಯರ ಮೇಲೆ ಆ ಸಿಡ್ ದಾಳಿ, ಮಹಿಳೆಯನ್ನು ಅನೇಕ ತುಂಡು ತುಂಡುಗಳಾಗಿ ಕತ್ತರಿಸುವುದು ಇಂತವರಿಗೆ ತಕ್ಷಣ ಮರಣದಂಡನೆ ವಿಧಿಸಿ ಎಂದು ಮನವಿ ಸಲ್ಲಿಸಿದ್ದಾರೆ..
ಪರೋಕ್ಷವಾಗಿ ಹೃತಿಕ್ ಗೆ ಟಾಂಟ್..?
ಕಳೆದ ಎರಡು ಮೂರು ವರ್ಷಗಳ ಹಿಂದೆ ನಟಿ ಕಂಗನಾ ನಟ ಹೃತಿಕ್ ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಎನ್ನಲಾಗಿತ್ತು. ಆದರೆ ಮದುವೆಗೆ ನಟ ಹೃತಿಕ್ ಒಪ್ಪಿಕೊಳ್ಳದ ಕಾರಣ ಅವರು ಬ್ರೇಕಪ್ ಮಾಡಿಕೊಂಡಿದ್ದರು. ಅದು ಅಷ್ಟಕ್ಕೆ ನಿಲ್ಲದೇ ಅವರ ನಡುವೆ ಸಾಕಷ್ಟು ಬಹಿರಂಗ ಟಾಕ್ ವಾರನ್ನೂ ಸೃಷ್ಟಿಸಿತ್ತು.

ಇದೀಗ ನಟಿ ಮಹಿಳೆಯ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ ಎಂದು ಪ್ರೇಮದ ಬಗ್ಗೆ ಬರೆದ ಬರಹ ಹೃತಿಕ್ ರೋಷನ್ ರನ್ನೂ ಪರೋಕ್ಷವಾಗಿ ಟಾರ್ಗೆಟ್ ಮಾಡಿ ಮಾಡಲಾಗಿದೆಯಾ ಎಂಬ ಚರ್ಚೆಯೂ ಇದೆ.
#THUNUSHA SHARMA #KANGANA RANAUT #ACTRESS #SUICIDE #SHOOTING SPOT #APPEAL #PRIME MINISTER #NARENDRA MODI #HRITHIK ROSHAN #LOVESTORY #POLYGAMY #TUFF RULE




