Gudhachari-2′ First Look Released : ಗೂಢಾಚಾರಿ-2’ ಫಸ್ಟ್ ಲುಕ್ ರಿಲೀಸ್ ; ನಟ ಅಡವಿ ಶೇಷ್ ತೆರೆ ಮೇಲೆ ಕಮಾಲ್

ಬೆಂಗಳೂರು :ಡಿ.30;  ಇತ್ತೀಚೆಗೆ ಬಿಡುಗಡೆ ಕಾಣುತ್ತಿರುವ ಸಿನಿಮಾಗಳೆಲ್ಲಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಸದ್ದು ಮಾಡೋಕೆ ಸಿದ್ದತೆ ನಡೆಸ್ತಿದೆ. ಅಡಿವಿ ಶೇಷ್ ನಟನೆಯಲ್ಲಿ ಮೂಡಿ ಬಂದ ಆಕ್ಷನ್ ಅಂಡ್ ಥ್ರಿಲ್ಲರ್ ಸಿನಿಮಾ ಗೂಢಾಚಾರಿ ತೆಲುಗು ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದು ಸೂಪರ್ ಹಿಟ್ ಸಿನಿಮಾ ಆಯಿತು. ಇದೀಗ ಇದೇ ತಂಡ ಮತ್ತೊಮ್ಮೆ ತೆರೆ ಮೇಲೆ ಕಮಾಲ್ ಮಾಡೋಕೆ ಬರ್ತಿದೆ.

ಅಡಿವಿ ಶೇಷ್ ನಟನೆಯ ‘ಗೂಢಾಚಾರಿ 2’ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಜನವರಿ 9ಕ್ಕೆ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಲಾಂಚ್ ಆಗಲಿದೆ.. ಮೇಜರ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸೂಪರ್ ಸಕ್ಸಸ್ ಕಂಡ ಅಡಿವಿ ಶೇಷ್ ಗೆ ಭಾರತದಾದ್ಯಂತ ಇವರ ಸಿನಿಮಾಗಳಿಗೆ ಅಭಿಮಾನಿಗಳಿದ್ದಾರೆ.

ಶಶಿ ಕಿರಣ್ ಟಿಕ್ಕ ನಿರ್ದೇಶನದಲ್ಲಿ ಮೂಡಿ ಬಂದ ‘ಗೂಢಾಚಾರಿ’ ಸಿನಿಮಾ ತೆಲುಗು ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಇವರಿಬ್ಬರ ಕಾಂಬಿನೇಶನ್ ನಲ್ಲಿ ಬಂದ ಪ್ಯಾನ್ ಇಂಡಿಯಾ ಸಿನಿಮಾ ಮೇಜರ್ ಕೂಡ ಸೂಪರ್ ಸಕ್ಸಸ್ ಕಂಡಿದೆ. ಇತ್ತೀಚೆಗೆ ತೆರೆಕಂಡ ‘ಹಿಟ್ 2’ ಕೂಡ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು ಇದೀಗ ‘ಗೂಢಾಚಾರಿ’ ಸೀಕ್ವೆಲ್ ಗೆ ರೆಡಿಯಾಗಿದ್ದಾರೆ ಅಡಿವಿ ಶೇಷ್.

‘ಗೂಢಾಚಾರಿ 2’ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆ. ಅಡಿವಿ ಶೇಷ್ ನಟನೆಯ ‘ಮೇಜರ್’ ಚಿತ್ರದ ಎಡಿಟರ್ ವಿನಯ್ ಕುಮಾರ್ ಸಿರಿಗಿನೀದಿ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಚಿತ್ರಕ್ಕೆ ಅಡಿವಿ ಶೇಷ್ ಕಥೆ ಬರೆದಿದ್ದು, ಕಾರ್ತೀಕೇಯ2, ಮೇಜರ್ ಹಾಗೂ ಕಾಶ್ಮೀರಿ ಫೈಲ್ಸ್ ನಂತ ಸೂಪರ್ ಹಿಟ್ ಸಿನಿಮಾ ನಿರ್ಮಾಣ ಮಾಡಿರೋ ದೊಡ್ಡ ನಿರ್ಮಾಣ ಸಂಸ್ಥೆಗಳು ‘ಗೂಢಾಚಾರಿ 2’ಗೆ ಬಂಡವಾಳ ಹೂಡುತ್ತಿವೆ.

ಇನ್ನು ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಚಿತ್ರತಂಡ ಜನವರಿ 9ರಂದು ಡೆಲ್ಲಿ ಹಾಗೂ ಮುಂಬೈನಲ್ಲಿ ಚಿತ್ರದ ಪ್ರಿ ವಿಷನ್ ವೀಡಿಯೋ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದೆ. ಮೊದಲ ಸೀಕ್ವೆಲ್ ನಲ್ಲಿದ್ದ ಕಲಾವಿದರ ಜೊತೆಗೆ ಒಂದಿಷ್ಟು ಹೊಸ ಪಾತ್ರವರ್ಗ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಕಥೆಗೆ ತಕ್ಕಂತೆ ಸಿನಿಮಾ ಮೇಕಿಂಗ್, ತಾಂತ್ರಿಕ ವರ್ಗ, ಆಕ್ಷನ್ ಸೀನ್ ಗಳು ದೊಡ್ಡ ಮಟ್ಟದಲ್ಲಿ ಮೂಡಿ ಬರಲಿದೆ ಎನ್ನಲಾಗಿದೆ.

More News