ಗಾಂಧಿನಗರ ; ಡಿ.31; ಗುಜರಾತ್ ನಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 9ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರವಾಗಿ ಗಾಯವಾಗಿದೆ. ಶನಿವಾರ ಮುಂಜಾನೆ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಗುಜರಾತ್ ನವಸಾರಿಯಲ್ಲಿ ಈ ಡೆಡ್ಲಿ ಆಕ್ಸಿಡೆಂಟ್ ನಡೆದಿದೆ. ಅಹಮದಾಬಾದ್-ಮುಂಬೈ ಹೆದ್ದಾರಿಯಲ್ಲಿ ಬಸ್ ಮತ್ತು ಎಸ್ ಯುವಿ ಕಾರಿನ ನಡುವೆ ಆಕ್ಸಿಡೆಂಟ್ ಸಂಭವಿಸಿದೆ. ಮುಂಜಾನೆ 4ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ. ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವಿ ಎನ್ ಪಟೇಲ್ ಮಾಹಿತಿ ನೀಡಿದ್ದಾರೆ.ಇನ್ನು ಟ್ವೀಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೃತರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ್ದಾರೆ.


ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ ಹೃದಯವಿದ್ರಾವಕವಾಗಿದೆ, ಈ ದುರಂತದಲ್ಲಿ ಕುಟುಂಬವನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು, ದೇವರು ಅವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ, ಸ್ಥಳೀಯ ಆಡಳಿತವು ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುತ್ತಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ, ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಟ್ವೀಟರ್ ನಲ್ಲಿ ನವಸಾರಿಯಲ್ಲಿ ಸಂಭವಿಸಿದ ಅಪಘಾತಕ್ಕೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.




