ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಶಾಸಕರ ಸಮಸ್ಯೆ, ಅನುದಾನ ನೀಡುವಿಕೆ ಸೇರಿದಂತೆ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿ ಅವರು ಮನವಿ ಮಾಡಿದರು. ಸಭೆಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿದಂತೆ ಸಚಿವರು, ಶಾಸಕರು ಭಾಗವಹಿಸಿದ್ದರು.