ಬೆಂಗಳೂರು : ಜ.05: ಬೆಂಗಳೂರು ಮತ್ತು ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ರಗತಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೆಲಿಕಾಪ್ಟರ್ ಮೂಲಕ ವೀಕ್ಷಣೆ ಮಾಡಿದರು. 262 ಕಿ.ಮೀ ಉದ್ದದ 8 ಲೇನ್ ಗಳಲ್ಲಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಈ ರಸ್ತೆಯಲ್ಲಿ ಗಂಟೆಗೆ 120 ಕಿ.ಮೀ ವೇಗದಲ್ಲಿ ವಿನ್ಯಾಸಗೊಳಿಸಿದ್ದಾರೆ. ಈ ರಸ್ತೆ ಕಾಮಗಾರಿಗೆ ಸುಮಾರು ₹16,730 ಕೋಟಿ ವೆಚ್ಚ ತಗುಲಿದೆ.



ಬೆಂಗಳೂರು ಮತ್ತು ಚೆನ್ನೈ ನಡುವಿನ ಅಂತರವನ್ನು 300 ಕಿ.ಮೀ ನಿಂದ 262 ಕಿಮೀಗೆ ಕಡಿಮೆ ಮಾಡಲಾಗಿದೆ. ಬೆಂಗಳೂರು ಮತ್ತು ಚೆನ್ನೈ ಎಕ್ಸ್‌ಪ್ರೆಸ್‌ವೇ ವೀಕ್ಷಣೆ ಮಾಡಿದ ಕೇಂದ್ರ ಸಚಿವರು. ಕರ್ನಾಟಕ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಹಾಗೂ ಕೋಲಾರ ಸಂಸದ ಎಸ್.ಮುನಿಸ್ವಾಮಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಹೆಲಿಕಾಪ್ಟರ್ ನಲ್ಲಿ ಹೆದ್ದಾರಿಯನ್ನು ವೀಕ್ಷಣೆ ಮಾಡಿದರು.




