ಬೆಂಗಳೂರು : ಜ.05; ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಯಿಮರಿಯಂತೆ ನಿಂತುಕೊಳ್ತಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದದ ಬಗ್ಗೆ ಗುರುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ನಾನು ಸಿಎಂ ಬೊಮ್ಮಾಯಿಗೆ ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಆ ಮಾತನ್ನು ಹೇಳಿದ್ದೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ ಪಡೆದಿದೆ.
— Siddaramaiah (@siddaramaiah) January 5, 2023
ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ @narendramodi ಅವರ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿ @BSBommai ಅವರನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ?
ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ? 7/10
ಟಿವಿ ಚಾನೆಲ್ನವರು ಪ್ರತಿದಿನ ನನ್ನನ್ನು 'ಟಗರು' 'ಟಗರು' ಎಂದು ಹಾಡು ಕಟ್ಟಿ ತೋರಿಸುತ್ತಾರೆ.
— Siddaramaiah (@siddaramaiah) January 5, 2023
ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ?
ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? 5/10
ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. @BJP4Karnataka ನಾಯಕರೇ @BSYBJP ಅವರನ್ನು "ರಾಜಾ ಹುಲಿ" ಎಂದು ಬಣ್ಣಿಸುತ್ತಾರೆ.
— Siddaramaiah (@siddaramaiah) January 5, 2023
ಇದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? 4/10
ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ.
— Siddaramaiah (@siddaramaiah) January 5, 2023
ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲೂ ಅಲ್ಲ. 3/10
ಮುಖ್ಯಮಂತ್ರಿ ಅವರನ್ನು ನಾಯಿಮರಿ ಎಂದು ಹೇಳಿಲ್ಲ. ಧೈರ್ಯ ಇರಬೇಕು ಎಂಬ ಅರ್ಥದಲ್ಲಿ ಹೇಳಿದ್ದೆ. ಕೇಂದ್ರದಿಂದ ಅನುದಾನ ತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 5ನೇ ಹಣಕಾಸು ಆಯೋಗದ 5495 ಕೋಟಿ ರೂಪಾಯಿ ತೆಗೆದುಕೊಂಡಿಲ್ಲ. ಇದನ್ನು ಕೇಳಲು ಧೈರ್ಯ ಬೇಕು. ನಾಯಿಮರಿ ಹಾಗೇ ಇರಬಾರದು ಎಂದಿದ್ದೆ. ಆ ರೀತಿ ಹೇಳುವುದು ಅಸಾಂವಿಧಾನವೇ? ನನಗೆ ಟಗರು ಅಂತಾರೆ, ಹುಲಿಯಾ ಅಂತಾರೆ ಅದು ಅಸಾಂವಿಧಾನಕವೇ.
ಮುಖ್ಯಮಂತ್ರಿ @BSBommai ಅವರಿಗೆ ಪ್ರಧಾನಿ @narendramodi ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಇದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ. 1/10
— Siddaramaiah (@siddaramaiah) January 5, 2023
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಅವರ ಪಕ್ಷದವರೇ ಕರೆಯುತ್ತಾರೆ. ಅವರು ಹುಲಿಯಾ. ನಾಯಿ ಎಂದರೆ ನಂಬಿಕೆಯುಳ್ಳ ಪ್ರಾಣಿ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.




