Congress Unity Convention : ಮಧ್ಯಕರ್ನಾಟಕ ಮತದಾದರ ಸೆಳೆಯಲು ಕಾಂಗ್ರೆಸ್ ಕಸರತ್ತು..!

ಚಿತ್ರದುರ್ಗ: ಜ.08 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮಧ್ಯಕರ್ನಾಟಕದ ಮತದಾರರ ಮೇಲೆ ಕಣ್ಣಿಟ್ಟಿದ್ದು ಇಂದು ಚಿತ್ರದುರ್ಗದಲ್ಲಿ ಬೃಹತ್ ಐಕತ್ಯಾ ಸಮಾವೇಶ ನಡೆಸುತ್ತಿದ್ದಾರೆ.

ಮಧ್ಯಕರ್ನಾಟಕದಲ್ಲಿ ನಡೆಯುತ್ತಿರೋ ಕಾಂಗ್ರೆಸ್ ನ ಎಸ್ ಸಿ, ಎಸ್ ಟಿ ಶಕ್ತಿ ಪ್ರದರ್ಶನದಲ್ಲಿ 5 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕಾಗಿ ವಿಶಾಲವಾದ ಬೃಹತ್ ವೇದಿಕೆ ಹಾಕಲಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ವೇದಿಕೆಯಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದೆ. ವೇದಿಕೆಯ ಮುಂಭಾಗ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಆಸೀನರಾಗಲು ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಸಮಾವೇಶಕ್ಕೆ ಆಗಮಿಸಲಿರೋ ಲಕ್ಷಾಂತರ ಜನರಿಗೆ ಭರ್ಜರಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ. ಹೋಳಿಗೆ, ಜಹಂಗೀರ್, ಮೈಸೂರು ಪಾಕ್ ತಯಾರಿಸಲಾಗಿದೆ. ಉಸ್ತುವಾರಿಯ ಹೊಣೆ ಹೊತ್ತಿರೋ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕಳೆದ ಮೂರು ದಿನದಿಂದ ಚಿತ್ರದುರ್ಗದಲ್ಲಿ ಬೀಡು ಬಿಟ್ಟಿದ್ದಾರೆ. ಪ್ರತಿಯೊಂದು ಹಂತದ ತಯಾರಿಯನ್ನು ಅವರೇ ಖುದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಚಿತ್ರದುರ್ಗದಲ್ಲೇ ಯಾಕೆ ಕಾಂಗ್ರೆಸ್ ನಾಯಕರು ಐಕ್ಯತಾ ಸಮಾವೇಶ ನಡೆಸುತ್ತಿದ್ದಾರೆ ಅಂತಾ ಕೆಲವು ಕಾರಣಗಳನ್ನು ನೋಡ್ತಾ ಹೋದ್ರೆ.

ಚಿತ್ರದುರ್ಗದಲ್ಲೇ ಯಾಕೆ ಐಕ್ಯತಾ ಸಮಾವೇಶ?
1) ದಲಿತ ಸಮುದಾಯಗಳ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ
2) 224 ಕ್ಷೇತ್ರಗಳ ಪೈಕಿ 173 ಕ್ಷೇತ್ರಗಳಲ್ಲಿ ಎಸ್ ಸಿ, ಎಸ್ ಟಿ ಮತಗಳ ಪ್ರಾಬಲ್ಯ
3) ಈ ಪೈಕಿ ಮಧ್ಯ ಕರ್ನಾಟಕ ಭಾಗದಲ್ಲೇ ದಲಿತ ಸಮುದಾಯ ಬೆಚ್ಚು
4) ಹಾಗಾಗಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ
5) ಸುತ್ತಮುತ್ತಲಿನ ಜಿಲ್ಲೆಗಳಿಂದ 1 ಸಾವಿರಕ್ಕೂ ಹೆಚ್ಚು ಬಸ್ ಗಳ ನಿಯೋಜನೆ


ಇನ್ನು ಕಾಂಗ್ರೆಸ್ ಐಕ್ಯತಾ ಸಮಾವೇಶಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೂ ಆಹ್ವಾನ ನೀಡಲಾಗಿದ್ದು, ಅವ್ರು ಕಾರ್ಯಕ್ರಮಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ. ಜಕ್ಕೂರು ವಿಮಾನ ನಿಲ್ದಾಣದಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ತೆರಳಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಮುಗಿದ ಬಳಿಕ ಹಾವೇರಿಯಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಭಯ ನಾಯಕರು ಭಾಗಿಯಾಗಲಿದ್ದಾರೆ.

More News