ಬೆಂಗಳೂರು : ಜ.09; ಕೆಪಿಸಿಸಿ ಪ್ರವಾಸ ಸಮಿತಿಯ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆಯಿತು.


ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವನಾರಾಣ, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಕೆ. ಸುರೇಶ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.




