LAST BUDGET DATE FIX: ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಗೆ ಮುಹೂರ್ತ ಫಿಕ್ಸ್: ಫೆಬ್ರವರಿ 17 ರಂದು ಸಿಎಂರಿಂದ ಆಯವ್ಯಯ ಮಂಡನೆ

ಬೆಂಗಳೂರು: ಬಿಜೆಪಿ ಸರ್ಕಾರದ ಕೊನೆಯ ಬಜೆಟ್ ಮಂಡನೆಗೆ ಮುಹೂರ್ತ ನಿಗದಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ಲಾಸ್ಟ್ ಬಜೆಟ್ ಆಗಿರೋದ್ರಿಂದ ರಾಜ್ಯದ ಜನರಿಗೆ ಬಂಪರ್ ಕೊಡುಗೆಗಳನ್ನು ಸರ್ಕಾರ ನೀಡಲಿದೆಯಾ ಎನ್ನುವುದು ಇದೀಗ ದೊಡ್ಡ ಪ್ರಶ್ನೆಯಾಗಿದೆ.
ಚುನಾವಣೆಗಾಗಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೆಲವು ಜನಪರ ಯೋಜನೆಗಳನ್ನು ಘೋಷಿಸುವ ಸಾಧ್ಯತೆಗಳಿವೆ. ಫೆಬ್ರವರಿ 16 ಜಂಟಿ ಅಧಿವೇಶನದ ಉದ್ದೇಶಿಸಿ ರಾಜ್ಯಪಾಲ ಭಾಷಣ ಮಾಡಲಿದ್ದಾರೆ. ಫೆಬ್ರವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯ ಸರ್ಕಾರದ ಕಣ್ಣಿದ್ದು, ಯಾವುದೇ ಹೊಸ ತೆರಿಗೆ ಇಲ್ಲದ ಬಜೆಟ್ ನೀಡಲು ಬೊಮ್ಮಾಯಿ ಸಜ್ಜಾಗಿದ್ದಾರೆ ಎನ್ನಲಾಗಿದೆ. ಏಪ್ರಿಲ್ ತಿಂಗಳ ಮಧ್ಯಭಾಗದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸಹಜವಾಗಿ ಮತದಾರರಿಗೆ ಆಕರ್ಷಣೀಯವಾದ ಯೋಜನೆಗಳನ್ನು ಘೋಷಣೆ ಮಾಡುವ ಲೆಕ್ಕಾಚಾರದಲ್ಲಿ ಬೊಮ್ಮಾಯಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ…

ಇತ್ತ ರಾಜ್ಯ ಕೋವಿಡ್ ಲಾಕ್ ಡೌನ್ ನಿಂದ ಚೇತರಿಕೆ ಕಾಣುತ್ತಿದ್ದು, ಗುರಿ ಮೀರಿ ಆದಾಯ ಸಂಗ್ರಹವಾಗುತ್ತಿರುವುದು ಸಿಎಂ ಬೊಮ್ಮಾಯಿ ನಿಟ್ಟುಸಿರು ಬಿಡುವಂತಾಗಿದೆ. ಆದಾಯ ಸಂಗ್ರಹ ಉತ್ತಮವಾಗಿರುವುದರಿಂದ ಚುನಾವಣಾ ಬಜೆಟ್ ಮಂಡನೆಯ ಹಾದಿ ಸುಗಮಗೊಳಿಸಿದೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಲು ಸಿಎಂ ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ರಾಜ್ಯದ ಆರ್ಥಿಕತೆ ಚೇತರಿಕೆ ಕಂಡಿದ್ದು, ತೆರಿಗೆ ಮೂಲಗಳು ಗುರಿ ಮೀರಿ ಆದಾಯ ಸಂಗ್ರಹ ಮಾಡುತ್ತಿವೆ.
2022-23 ಸಾಲಿನ ಮೊದಲಾರ್ಧ ವರ್ಷದಲ್ಲಿ ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿಗೂ ಹೆಚ್ಚು ರಾಜಸ್ವ ಸ್ವೀಕೃತಿಯಾಗಿದೆ. ಇದರಲ್ಲಿ ಕೇಂದ್ರದ ಸಹಾಯಾನುದಾನ, ತೆರಿಗೆ ಪಾಲು ಸೇರಿದೆ. ಇತ್ತ ಜಿಎಸ್‍ಟಿ ಸಂಗ್ರಹ ನಿರೀಕ್ಷೆಗೂ ಮೀರಿ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹಿಸುವ ಎಲ್ಲ ಇಲಾಖೆಗಳು ಬಜೆಟ್ ಗುರಿ ಮೀರಿ ಆದಾಯ ಸಂಗ್ರಹಿಸುತ್ತಿರುವುದು ಸಿಎಂ ಬೊಮ್ಮಾಯಿ ಅವರನ್ನು ನಿರಾಳರನ್ನಾಗಿಸಿದೆ.

#STATE BUDGET #BUDGET2022-23 #CMBOMMAI #BASAVARAJ BOMMAI #FEBRUARY 17TH #GOVERNOR

More News