ಹುಬ್ಬಳ್ಳಿ: ಜ.11: ನಾಳೆ ನಡೆಯುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವ ಹಿನ್ನೆಲೆಯಲ್ಲಿ, ನಗರದಲ್ಲಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾಳೆ ನಡೆಯುವ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರೋಡ್ ಮೂಲಕ ಬರುತ್ತಾರೆ. ಈ ಕಾರ್ಯಕ್ರಮಕ್ಕೆ 50 ಸಾವಿರಕ್ಕೂ ಹೆಚ್ಚು ಯುವಕರು, ಯುವತಿಯರು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ಬಸ್‌ಗಳಿಗೆ ಬೇರೆ ಮಾರ್ಗವನ್ನು ಸೂಚಿಸಿದೆ. ಇಲ್ಲಿ ಎಲ್ಲರಿಗೂ ಅವಕಾಶ ನೀಡಲಿದೆ. ರಾಜ್ಯ ಮತ್ತು ಅಂತರಾಜ್ಯದಿಂದ ಜನರು ಬರುತ್ತಿದ್ದಾರೆ. ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದರು.




