FINAL ODI MATCH: ನಾಳೆ ಭಾರತ v ಶ್ರೀಲಂಕಾ ಕೊನೆಯ ಏಕದಿನ: ಕ್ಲೀನ್ ಸ್ವೀಪ್ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

ಭಾರತ ಮತ್ತು ಶ್ರೀಲಂಕಾ ನಡುವಿನ ODI ಸರಣಿಯ ಕೊನೆಯ ಪಂದ್ಯ ನಾಳೆ(ಜ.15 ರಂದು) ನಡೆಯಲಿದ್ದು, ತಿರುವನಂತಪುರಂನಲ್ಲಿ ನಡೆಯಲಿರುವ ಪಂದ್ಯಕ್ಕೆ ಎರಡು ತಂಡಗಳು ಸಜ್ಜಾಗಿವೆ.
ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ ಅಂತಿಮ ಪಂದ್ಯವನ್ನ ಗೆದ್ದು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದ್ದರೆ. ಕೊನೆಯ ಪಂದ್ಯವನ್ನ ಗೆದ್ದು ಪ್ರತಿಷ್ಠೆ ಉಳಿಸಿಕೊಳ್ಳಲು ಶ್ರೀಲಂಕಾ ತಯಾರಿ ಮಾಡಿಕೊಂಡಿದೆ.
ಈ ನಡುವೆ 2-0 ಸರಣಿ ಮುನ್ನಡೆ ಹೊಂದಿರುವ ಭಾರತ, ಅಂತಿಮ ಪಂದ್ಯಕ್ಕಾಗಿ ಕೆಲವು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಮೊದಲೆರಡು ಪಂದ್ಯದಲ್ಲಿ ಬೆಂಚ್ ಕಾಯ್ದಿದ್ದ ಇಶಾನ್ ಕಿಶನ್ ನಾಳಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ODI ಪಂದ್ಯದಲ್ಲಿ ದ್ವಿಶತಕ ಸಿಡಿಸಿ ಮಿಂಚಿದ್ದ ಇಶಾನ್ ಕಿಶನ್, ಲಂಕಾ ವಿರುದ್ಧ ಸರಣಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಹೀಗಾಗಿ ಭಾನುವಾರ ನಡೆಯುವ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅವರನ್ನ ಆಡಿಸುವ ಸಾಧ್ಯತೆ ಇದೆ. ಇನ್ನೂ ಟಿ20 ಸ್ಪೆಷಲಿಸ್ಟ್ ಸೂರ್ಯಕುಮಾರ್ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ.

ಒಂದೊಮ್ಮೆ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದರೆ ಶ್ರೇಯಸ್ ಅಯ್ಯರ್ ಅಥವಾ ಕೆಎಲ್ ರಾಹುಲ್ ಅವರು ತಂಡದಿಂದ ಹೊರಗುಳಿಯ ಬಹುದು. ಕಳೆದ ಎರಡು ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ಕೆ.ಎಲ್. ರಾಹುಲ್, ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ಹೊತ್ತಿದ್ದರು. ಒಂದು ವೇಳೆ ಇಶಾನ್ ಕಿಶನ್ ತಂಡದಲ್ಲಿ ಆಡುವ ಅವಕಾಶ ಪಡೆದರೆ, ವಿಕೆಟ್ ಕೀಪಿಂಗ್ ಜವಾಬ್ದಾರಿ ಅವರಿಗೆ ನೀಡಲಾಗುತ್ತದೆ. ಇದರ ಪರಿಣಾಮ ಕನ್ನಡಿಗ ಕೆ.ಎಲ್.ರಾಹುಲ್ ಅವರಿಗೆ ಅಂತಿಮ ಪಂದ್ಯದಿಂದ ವಿಶ್ರಾಂತಿ ನೀಡಬಹುದು.
ಇನ್ನೂ ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಏಕೈಕ ಸ್ಪಿನ್ನರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಆಲ್‌ರೌಂಡರ್‌ ಆಗಿ ಇರಲಿದ್ದಾರೆ. ಉಳಿದಂತೆ ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ವೇಗದ ಬೌಲಿಂಗ್ ವಿಭಾಗದಲ್ಲಿ ಆಡುವುದು ಖಚಿತವಾಗಿದೆ.

#INDIA #SRILANKA #ROHITSHARMA #VIRAT KOHLI #KLRAHUL #ISHANTH KISHAN #SREYAS IYYER #SURYAKUMAR YADAV #SERIES WIN #CLEAN SWEEP

More News