‘HONDISI BAREYIRI’: ಬದುಕನ್ನು ಹೊಂದಿಸಿ ಬರೆಯೋ ಪಾಠ ಹೇಳೋಕೆ ಸಜ್ಜಾಗಿದೆ ಸ್ಯಾಂಡಲ್ ವುಡ್: 10 ಕ್ಕೆ ತೆರೆಗೆ ಸಜ್ಜು

ಬದುಕು ಎಲ್ಲರಿಗೂ ಒಂದೇ ರೀತಿ ಆಗಿರೋದಿಲ್ಲ. ಅಲ್ಲಿ ಏಳು, ಬೀಳು ಎಲ್ಲವೂ ಇರುತ್ತೆ. ಆದರೆ ಎಂತದ್ದೇ ಪರಿಸ್ಥಿತಿ ಎದುರಾದರೂ ಅದನ್ನು ಹೊಂದಿಸಿ ಹೊಸದಾಗಿ ಬರೆಯಿರಿ ಅನ್ನೋದನ್ನು ಹೇಳೋದಕ್ಕೆ ಸ್ಯಾಂಡಲ್ ವುಡ್ ಸಜ್ಜಾಗಿದೆ. ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ‘ಹೊಂದಿಸಿ ಬರೆಯಿರಿ’ ಸಿನಿಮಾ ತೆರೆಗೆ ಫೆಬ್ರವರಿ 10ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಬಹು ತಾರಾಗಣದ ಈ ಚಿತ್ರ ಕಲರ್ ಫುಲ್ ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ ಬಹು ನಿರೀಕ್ಷಿತ ಹಾಡು ‘ಸೋಲ್ ಆಫ್ ಹೊಂದಿಸಿ ಬರೆಯಿರಿ’ ಬಿಡುಗಡೆ ಮಾಡಿದೆ ಚಿತ್ರತಂಡ. ‘ಸೋಲ್ ಆಫ್ ಹೊಂದಿಸಿ ಬರೆಯಿರಿ’ ಹಾಡಿಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯ ಬರೆದಿದ್ದು, ಐಶ್ವರ್ಯ ರಂಗರಾಜನ್ ಹಾಡಿಗೆ ದನಿಯಾಗಿದ್ದಾರೆ.

ಇಡೀ ಸಿನಿಮಾದ ಆಶಯವನ್ನು ಕಟ್ಟಿಕೊಡುವ ಈ ಹಾಡು ಚಿತ್ರದಲ್ಲಿ ಬಹಳ ಮುಖ್ಯ ಪಾತ್ರವಹಿಸಲಿದ್ದು, ಜೋ ಕೋಸ್ಟ ಸಂಗೀತ ಸಂಯೋಜನೆ ಮನ ಮುಟ್ಟುತ್ತಿದೆ. ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎಂಬ ಎಳೆಯ ಸುತ್ತ ಹೆಣೆಯಲಾದ ಸುಂದರ ಕಥಾಹಂದರ ಈ ಚಿತ್ರ.
ಐದು ಜನ ಸ್ನೇಹಿತರ ಬದುಕಿನ ಕಥೆ ಹಾಗೂ ಭಾವನಾತ್ಮಕ ಜರ್ನಿಯನ್ನು ಒಳಗೊಂಡ ಈ ಚಿತ್ರದಲ್ಲಿ ಪ್ರವೀಣ್ ತೇಜ್, ಭಾವನಾ ರಾವ್, ಸಂಯುಕ್ತ ಹೊರನಾಡು, ಐಶಾನಿ ಶೆಟ್ಟಿ, ನವೀನ್ ಶಂಕರ್, ಶ್ರೀ ಮಹದೇವ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಒಳಗೊಂಡ ಕಲರ್ ಫುಲ್ ಕಲಾವಿದರ ಸಮಾಗಮವಿದೆ.

ರಾಮೇನಹಳ್ಳಿ ಜಗನ್ನಾಥ್ ಈ ಚಿತ್ರದ ಸೂತ್ರಧಾರ. ನಿರ್ದೇಶನದ ಜೊತೆ ಸ್ನೇಹಿತರೊಡಗೂಡಿ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಚಿತ್ರದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಎಂಟು ಹಾಡುಗಳಿದ್ದು ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ.

#SANDLEWOOD MOVIE #HONDISI BAREYIRI #COMEDY MOVIE #SUNIL PURANIK #NANJUNDE GOWDA

More News