ವಾಷಿಂಗ್ಟನ್ ನಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ

ವಾಷಿಂಗ್ಟನ್ : ಮೂರು ದಿನಗಳ ಅಮೆರಿಕಾ ಪ್ರವಾಸಕ್ಕೆ ತೆರಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಾಷಿಂಗ್ಟನ್ ಡಿಸಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಅಮೆರಿಕಾದ ವಿದೇಶಾಂಗ ಸಚಿವಾಲಯದಅಧಿಕಾರಿಗಳು ಮೋದಿ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.


ಅಮೆರಿಕಾದಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಿಂಧು ಕೂಡ ವಿಮಾನನಿಲ್ದಾಣದಲ್ಲಿ ಹಾಜರಿದ್ದು ಮೋದಿ ಅವರನ್ನು ಬರಮಾಡಿಕೊಂಡರು.. ವಿಮಾನ ನಿಲ್ದಾಣದಲ್ಲಿ ಸೇರಿದ್ದ ನೂರಾರು ಸಂಖ್ಯೆಯ ಆನಿವಾಸಿ ಭಾರತೀಯರು ಪ್ರಧಾನಿ ಮೋದಿ ಅವರನ್ನು ಕೈಕುಲುಕಿ ಸ್ವಾಗತಿಸಿದರು. ಜೈಮೋದಿ ಎಂಬ ಘೋಷಣೆಗಳು ಮೊಳಗಿದವು.
ತಮ್ಮ ಮೂರು ದಿನಗಳ ಅಮೆರಿಕ ಭೇಟಿಯಲ್ಲಿ, ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ ಮತ್ತು ಕ್ವಾಡ್ ದೇಶಗಳ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಫೋಟೋ ವೈರಲ್
ಪ್ರಧಾನಿ ಮೋದಿ ಅಮೆರಿಕಾಕ್ಕೆ ತೆರಳುವಾಗಿ ವಿಮಾನದಲ್ಲಿ ತೆಗೆದ ಫೋಟೋ ವೈರಲ್ ಆಗಿದ್ದು, ಸಾಕಷ್ಟು ಜನರು ಈ ಹಿಂದಿನ ಪ್ರಧಾನಮಂತ್ರಿ ಅವರು ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವಾಗ ಕಡತಗಳ ಪರಿಶೀಲನೆ ಫೋಟೋ ಹಾಕಿದ್ದಾರೆ.

More News