Congress filed A Complaint : ರಮೇಶ್ ಜಾರಕಿಹೊಳಿ ಮತ್ತು ಸಿಎಂ ಬೊಮ್ಮಾಯಿ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ ಕಾಂಗ್ರೆಸ್

ಬೆಂಗಳೂರು :ಜ.25: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದೂರು ದಾಖಲಿಸಿದ್ದಾರೆ.

ಪ್ರತಿ ಮತದಾರನಿಗೆ 6 ಸಾವಿರ ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಂಚು ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧವೂ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.

More News