ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ರಾಜ್ಯ ಕಾಂಗ್ರೆಸ್ ಬೆಂಬಲ ಘೋಷಣೆ

ಬೆಂಗಳೂರು : ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.27 ಸೋಮವಾರ  ರೈತ ಸಂಘಟ ನೆಗಳು ಕರೆ ನೀಡಿರುವ ”ಭಾರತ್ ಬಂದ್” ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.

ಈ ಸಂಬಂಧ ಪ್ರತಿಕಾ ಪ್ರಕಟಣೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆ ಗೆ  ಪಕ್ಷದ ಬೆಂಬಲವಿದೆ  ಎಂದು ತಿಳಿಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾ ರಗಳ ರೈತ ವಿರೋಧಿ ಧೋರಣೆಯಿಂದಾಗಿ ದೇಶ ದ ಬಹುಸಂಖ್ಯಾತ ಅನ್ನದಾತ ಸಮುದಾಯ ತೀವ್ರ ವಿಷ ಮ ಪರಿಸ್ಥಿತಿ ಎದುರಿಸುತ್ತಿದೆ.ಕೆಲವೇ ಮಂದಿ ಉದ್ಯಮಿಗಳ ಬೆಂಬಲಕ್ಕೆ ನಿಂತಿರುವ ಬಿಜೆಪಿ ಇಡೀ ಶ್ರಮಿಕ ಜನಸಮುದಾಯವನ್ನು ವಂಚಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ಕರಾಳ ಶಾಸನ,ನೀತಿ ಹಾಗೂ ಧೋರಣೆ ವಿರುದ್ಧ ರೈತರು ದಿಲ್ಲಿಯ ರಸ್ತೆಗಳಲ್ಲಿ ವರ್ಷಗಳಿಂದ ಹೋರಾ ಟ ನಡೆಸಿದ್ದಾರೆ.ರೈತರ ಹೋರಾಟವನ್ನು ಹತ್ತಿಕ್ಕುವ ನಿರಂತರ ಪ್ರಯತ್ನ ನಡೆಸಿದ ಬಿಜೆಪಿ ಸರ್ಕಾರಕ್ಕೆ,ಅವರ ನ್ಯಾಯಯುತ ಬೇಡಿಕೆ ಗಳನ್ನು ಕೇಳುವ ಕನಿಷ್ಟ ಸೌಜನ್ಯ ತೋರಿಲ್ಲ.ಇದು ಬಿಜೆಪಿಯ ಅಮಾನವೀಯ ಮನಃಸ್ಥಿತಿಗೆ ನಿದರ್ಶನ ಎಂದು ಅವರು ಕಿಡಿಕಾರಿ ದ್ದಾರೆ.ರೈತರ ಹಿತರಕ್ಷಣೆಗಾಗಿ ದಶಕದ ಹಿಂದೆಯೇ ಭೂಸ್ವಾಧೀನ ಕಾಯ್ದೆಯನ್ನು ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಜಾರಿ ಮಾಡಿತ್ತು.ಆದರೆ,ಅದಕ್ಕೆ ವಿರುದ್ದವಾದ ದಿಕ್ಕಿನಲ್ಲಿ ಸಾಗಿದ ಮೋದಿ ಸರ್ಕಾರವು,ಕಳೆದ 7 ವರ್ಷಗಳಲ್ಲಿ ದೇಶದ ರೈತರ ಬದುಕನ್ನು ಅಸಹನೀಯಗೊಳಿಸಿದೆ.ಇದರ ವಿರುದ್ದ ರೈತರು ನಡೆಸುತ್ತಿರುವ ಹೋರಾಟವನ್ನು ಒಬ್ಬ ರೈತನ ಮಗನಾಗಿ  ಬೆಂಬಲಿಸುತ್ತೇನೆ.ನಮ್ಮ ಕಾಂಗ್ರೆಸ್ ಪಕ್ಷದ ನೈತಿಕ ಬೆಂಬಲವೂ ಇದೆ. ಹೋರಾಟ ಶಾಂತಿಯುತವಾಗಿರಲಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

More News