ಕೃಷಿ ಕಾಯಿದೆಗಳ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ: ಆರಂಭದಲ್ಲಿ ನೀರಸ ಪ್ರತಿಕ್ರಿಯೆ

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ ನೀಡಿದೆ.


ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡವು. ಬೆಳಗ್ಗೆ ಒಂಭತ್ತು ಗಂಟೆಯ ಹೊತ್ತಿಗೆ ಬಸ್ ಸಂಚಾರ ಎಂದಿನಂತೆ ಇತ್ತು. ಹಾಗೆಯೇ ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯ ಕಂಡುಬಂದಿಲ್ಲ. ಅಂಗಡಿ, ಮುಂಗಟ್ಟುಗಳು ಎಂದಿನಂತೆ ತೆರೆದಿದ್ದವು.


ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಸ್ತೆಯಲ್ಲಿ ಟಯರ್ ಗಳನ್ನು ಇಟ್ಟು ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರೈತ ವಿರೋಧಿ ಬಿಜೆಪಿ ಸರ್ಕಾರ ಕೂಡಲೇ ಮೂರು ಕಾಯಿದೆಗಳನ್ನು ಬಿಂಪಡೆಯಬೇಕೆಂದು ಆಗ್ರಹಿಸಿದರು.

More News