Ram Charan : ದಿನೇ ದಿನೇ ಹೆಚ್ತಿದೆ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ : RRR ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ

ಹೈದ್ರಾಬಾದ್.ಫೆ.4: RRR ಸಿನಿಮಾ ಭಾರೀ ಸೌಂಡ್ ಮಾಡಿದ ಬಳಿಕ ನಟ ರಾಮ್ ಚರಣ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. RRR ಆಯ್ತು.. ಮುಂದೇನು ಎಂಬ ಅಭಿಮಾನಿಗಳ ಪ್ರಶ್ನೆಗೆ ದೊಡ್ಡದಾದ ಕಾಲ್ ಶೀಟ್ ನ್ನೇ ನೀಡ್ತಿದ್ದಾರೆ ನಟ ರಾಮ್..

ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ಜೊತೆ ರಾಮ್ ಚರಣ್ ಸ್ಕ್ರೀನ್ ಶೇರ್

ಹೌದು, ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಶನ್ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

ಇನ್ನು ಶಂಕರ್ ನಿರ್ದೇಶನದ ಸಿನಿಮಾ ಇದೇ ವರ್ಷ ಬಿಡುಗಡೆಯಾಗುವ ಸಾದ್ಯತೆ ಇದೆ. ಸದ್ಯದ್ಲಲೇ ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

ಇದಷ್ಟೇ ಅಲ್ಲದೇ, ಈ ಸಿನಿಮಾ ನಂತರ ಬುಚ್ಚಿ ಬಾಬು ಸನಾ ನಿರ್ದೇಶನ ಮತ್ತು ವೆಂಕಟ ಸತೀಶ್ ಕಿಲಾರು ನಿರ್ಮಾಣದ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ, ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ಸಿನಿಮಾಗೂ ರಾಮ್ ಗ್ರೀನ್ ಸಿಗ್ನಲ್ ನೀಡಿದ್ದು, ಭಾರೀ ಬ್ಯುಸಿಯಾಗಿದ್ದಾರೆ.

More News