ಬೆಂಗಳೂರು;ಫೆ.6: ಕನ್ನಡ ಚಿತ್ರ ರಸಿಕರ ಅಧ್ಯಕ್ಷ, ಹಾಸ್ಯ ನಾಯಕ ನಟ ಶರಣ್ ರಿಗೆ ಇಂದು 51ನೇ ಹುಟ್ಟು ಹಬ್ಬದ ಸಂಭ್ರಮ.. ಶರಣ್ ಹುಟ್ಟು ಹಬ್ಬದ ಹಿನ್ನಲೆಯಲ್ಲಿಹೊಸ ಸಿನಿಮಾ ಘೋಷಣೆ ಮಾಡಲಾಗಿದೆ. ಶರಣ್ ಮುಂದಿನ ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ನಿರ್ದೇಶಕರಾಗಿದ್ದು, ಶರಣ್ ಡಿಫರೆಂಟ್ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ..
ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಚಿತ್ರದಲ್ಲಿ ಶರಣ್ ನಟಿಸುತ್ತಿದ್ದು, ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದೆ ಎನ್ನಲಾಗಿದೆ. ಇಂದು ಶರಣ್ ಹುಟ್ಟುಹಬ್ಬ ಹಿನ್ನಲೆಯಲ್ಲಿ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ನೀಡಿದೆ.

ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎನ್ನಲಾಗಿದೆ.
ಸಿನಿಮಾದಲ್ಲಿ ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ.

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಸಿನಿಮಾಗಿದೆ.




