ಮಂಡ್ಯ.ಫೆ.6: ಬ್ರಾಹ್ಮಣರು ಯಾಕೆ ಸಿಎಂ ಆಗಬಾರದು? ಅವರು ಭಾರತದ ಪ್ರಜೆಗಳಲ್ಲವೆ.? ಎಂದು ಉಡುಪಿ ಮಠದ ಪೇಜಾವರ ಶ್ರೀಗಳು ಪಶ್ನಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಖ್ಯಾ ಬಲ ಇಲ್ಲ, ಅಲ್ಪಸಂಖ್ಯಾತರು ಇದ್ದಾರೆ ಆದ್ರಿಂದ ಮಾತನಾಡ್ತಾರೆ. ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮದ್ದೂರಿನಲ್ಲಿ ಪ್ರತಿಕ್ರಿಯಿಸಿದ ಉಡುಪಿ ಮಠದ ಪೇಜಾವರ ಶ್ರೀಗಳು, ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರ್ತಿದೆ.

ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣುತ್ತೆ. ಬ್ರಾಹ್ಮಣರು ಯಾರು ಧ್ವನಿ ಎತ್ತಿ ಮಾತನಾಡುವವರು ಇಲ್ಲ. ಸಂಖ್ಯಾ ಬಲ ಇಲ್ಲಾ, ಅಲ್ಪಸಂಖ್ಯಾತರು ಇದ್ದಾರೆ ಆದ್ರಿಂದ ಏನು ಮಾತನಾಡಿದ್ರು ನಡೆಯತ್ತೆ ಎಂದು ಮಾತನಾಡ್ತಾರೆ. ರಾಜ್ಯದಲ್ಲಿ ಬ್ರಾಹ್ಮಣ MLA ಎಷ್ಟು ಜನ ಬಂದಿದ್ದಾರೆ? ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ? ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು? ಅವರು ಭಾರತದ ಪ್ರಜೆಗಳಲ್ಲವೆ ಎಂದು ಉಡುಪಿ ಮಠದ ಪೇಜಾವರ ಶ್ರೀಗಳು ಪ್ರಶ್ನಿಸಿದ್ದಾರೆ.
ಬ್ರಾಹ್ಮಣರಿಂದಲೆ ಗಾಂಧಿ ಹತ್ಯೆ…!

ಬ್ರಾಹ್ಮಣರಿಂದಲೆ ಗಾಂಧಿ ಹತ್ಯೆ ಎಂಬ ಹೆಚ್ ಡಿಕೆ ಹೇಳಿಕೆ ಬಗ್ಗೆ ಮಾತನಾಡಿ ಪೇಜಾವರ ಶ್ರೀಗಳು, ಅವರು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನು ದೂಷಿಸುವುದಾದರೆ. ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ? ಬ್ರಾಹ್ಮಣ ಸಮಾಜವನ್ನ ದೂರು ಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರುತ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದ್ರೆ. ಅನ್ಯಾಯವಾದಗ ಒಂದು ಧರ್ಮದ ವಿರುದ್ದ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಶ್ರೀಗಳು ಹೇಳಿದರು.




