Lithium Metal Found : ಜಮ್ಮು- ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಲಿಥಿಯಮ್ ಲೋಹ ಪತ್ತೆ

ನವದೆಹಲಿ:ಫೆ.10: ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ಸಂಶೋಧನೆಯೊಂದನ್ನು ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಸುಮಾರು 59 ದಶಲಕ್ಷ ಟನ್ ಲಿಥಿಯಲ್ ಲೋಹವನ್ನು ಪತ್ತೆ ಮಾಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ ಈ ನಿಕ್ಷೇಪ ಕಾಣಿಸಿಕೊಂಡಿದ್ದು, ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ ತಯಾರಿಕೆಗೆ ಬಳಸಲಾಗುತ್ತದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಷ್ಟೊಂದು ಬೃಹತ್ ಪ್ರಮಾಣದ ನಿಕ್ಷೇಪ ಪತ್ತೆಯಾಗಿದೆ. ಇಲ್ಲಿ ಲಿಥಿಯಮ್ ಹಾಗೂ ಚಿನ್ನ ಸೇರಿದಂತೆ 51 ಖನಿಜ ಬ್ಲಾಕ್‌ಗಳನ್ನ ಸ್ಥಳೀಯ ರಾಜ್ಯ ಸರ್ಕಾರಗಳಿಗೆ ಒಪ್ಪಿಸಲಾಗಿದೆ ಎಂದು ಎಂದು ಕೇಂದ್ರ ಸರ್ಕಾರದ ಗಣಿ ಸಚಿವಾಲಯವು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾದ ನಿಕ್ಷೇಪಗಳ ಪೈಕಿ 5 ಚಿನ್ನದ್ದು ಆಗಿವೆ‌. ಉಳಿದವು ಪೊಟ್ಯಾಸಿಯಂ, ಮಾಲಿಬ್ಡಿನಮ್ ಹಾಗೂ ಲೋಹ ಸರಕುಗಳಿಗೆ ಸಂಬಂಧಪಟ್ಟದ್ದಾಗಿವೆ. ಇವುಗಳು ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತಮಿಳುನಾಡು ಮತ್ತು ತೆಲಂಗಾಣ ಸೇರಿ 11 ರಾಜ್ಯಗಳಲ್ಲಿ ಹರಡಿಕೊಂಡಿವೆ ಎಂದು ಕೇಂದ್ರ ಸರ್ಕಾರವು ಮಾಹಿತಿ ನೀಡಿದೆ.

ಹೊಸದಿಲ್ಲಿಯಲ್ಲಿ ಆಯೋಜಿಸಿದ್ದ ಭೂಗರ್ಭಶಾಸ್ತ್ರ ಪ್ರೋಗ್ರಾಮಿಂಗ್ ಬೋರ್ಡ್ ಸಭೆಯಲ್ಲಿ ಕೇಂದ್ರ ಗಣಿ ಸಚಿವಾಲಯ ಕಾರ್ಯದರ್ಶಿ ವಿವೇಕ್ ಭಾರದ್ವಾಜ್ ಮಾತನಾಡಿ, ಮೊಬೈಲ್, ಸೋಲಾರ್ ಸೇರಿದಂತೆ ಅನೇಕ ವಸ್ತುಗಳಿಗೆ ಖನಿಜ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತ ದೇಶವು ಸ್ವಾವಲಂಬಿಯಾಗಿ ಖನಿಜ ಸಂಪನ್ಮೂಲಗಳನ್ನು ಉತ್ಪಾದನೆ ಮಾಡಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ದೇಶವು ನಿರ್ಣಾಯಕ ತೀರ್ಮಾನ ಮಾಡಬೇಕದೆ. ಆ ನಿಟ್ಟಿನಲ್ಲಿ ಖನಿಜಗಳನ್ನು ಕಂಡು ಹಿಡಿವ ಕಡೆಗೆ ಮತ್ತು ಸಂಸ್ಕರಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರವನ್ನು ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಭಾರತವು ನಿಕ್ಕಲ್, ಕೋಬಾಲ್ಟ್ ಹಾಗೂ ಲಿಥಿಯಮ್ ಎಂಬಂತಹ ಹಲವಾರು ಖನಿಜ ಆಮದು ಮಾಡಿಕೊಳ್ಳಲಾಗುತ್ತಿದೆ. ಸರಿಸುಮಾರು 7,897 ದಶಲಕ್ಷ ಟನ್‌ನಷ್ಟಿರುವ ಕಲ್ಲಿದ್ದಲು ಮತ್ತು ಲಿಗ್ನೈಟ್‌ ಸಂಪನ್ಮೂಲಕ್ಕೆ ಸಂಬಂಧಿಸಿದಂತೆ ವರದಿಗಳನ್ನ ಕಲ್ಲಿದ್ದಲು ಸಚಿವಾಲಯಕ್ಕೆ ಹಸ್ತಾಂತರಿಸಲಾಗಿದೆ.

More News