WT20 World Cup: ಪಾಕ್‌ ವಿರುದ್ಧದ ಹೈವೋಲ್ಟೇಜ್‌ ಪಂದ್ಯಕ್ಕೆ ಸ್ಮೃತಿ ಮಂದಾನ ಆಡುವುದು ಅನುಮಾನ

ಸೌತ್‌ ಆಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಪಂದ್ಯಕ್ಕೆ ಭಾರತ ತಂಡ ಸಜ್ಜಾಗಿದ್ದು, ಈ ನಡುವೆ ಪಾಕಿಸ್ತಾನದ ವಿರುದ್ಧ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ತಂಡದ ಸ್ಟಾರ್‌ ಪ್ಲೇಯರ್‌ ಸ್ಮೃತಿ ಮಂದಾನ ಕಣಕ್ಕಿಳಿಯುವುದು ಅನುಮಾನವಾಗಿದೆ.

ಟಿ20 ವಿಶ್ವಕಪ್‌ನ ಮೊದಲ ಪಂದ್ಯದ ಹಿನ್ನೆಲೆಯಲ್ಲಿ ಭಾರತ ಮಹಿಳಾ ತಂಡದ ಆಟಗಾರ್ತಿಯರು ತಮ್ಮದೇ ತಂತ್ರಗಾರಿಕೆ ರೂಪಿಸಿಕೊಂಡಿದೆ. ಫೆ.12ರಂದು ಟೀಂ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಸವಾಲು ಎದುರಿಸಲಿದೆ. ಆದರೆ ಮಹತ್ವದ ಪಂದ್ಯಕ್ಕೆ ಭಾರತ ತಂಡದ ಉಪನಾಯಕಿ ಸ್ಮೃತಿ ಮಂದಾನ ಆಡುವ ಸಾಧ್ಯತೆ ಕಡಿಮೆ ಇರುವುದು ತಂಡಕ್ಕೆ ಹಿನ್ನಡೆ ಮೂಡಿಸಲಿದೆ.
ತಂಡದ ಆರಂಭಿಕ ಬ್ಯಾಟರ್‌ ಆಗಿರುವ ಸ್ಮೃತಿ ಮಂದಾನ, ಬೆರಳು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಮಂದಾನ ಅವರ ಎಡಗೈ ಬೆರಳಿಗೆ ಗಾಯವಾಗಿತ್ತು. ಹೀಗಾಗಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಮಂದಾನ ಆಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಮತ್ತೊಂದೆಡೆ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಸಹ ಮೊದಲ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್‌ ಆಗಿಲ್ಲ ಎನ್ನಲಾಗುತ್ತಿದೆ. ಫಿಟ್ನೆಸ್‌ ಸಮಸ್ಯೆ ಕಾರಣದಿಂದಾಗಿ ಹರ್ಮನ್‌ಪ್ರೀತ್‌, ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಕಣಕ್ಕಿಳಿಯಲಿಲ್ಲ. ಒಂದೊಮ್ಮೆ ಹರ್ಮನ್‌ಪ್ರೀತ್‌ ಸಹ ಮೊದಲ ಪಂದ್ಯಕ್ಕೆ ಅಲಭ್ಯರಾದರೆ ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

#WOMENS T20 WORLD CUP #INDIA #PAKISTAN #SMRITI MANDHANA #HARMANPREET KAUR #NOT FIT #DOUBTFUL #HIGH VOLTAGE MATCH

More News