ಬೆಂಗಳೂರು :ಫೆ.15: ಕಾಂತಾರ ಸಿನಿಮಾ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಚಿತ್ರೋದ್ಯಮದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಕಾಂತಾರ ಸಿನಿಮಾ ಅನೇಕ ವಿವಾದಗಳ ನಡುವೆಯೇ ದೇಶದಾದ್ಯಂತ ಸಂಚಲನ ಸೃಷ್ಟಿಸಿತು. ಬಹುಭಾಷೆಗಳಲ್ಲಿ ಬಿಡುಗಡೆಯಾಗುವ ಮೂಲಕ ಹೊಸ ಹುರುಪನ್ನು ತಂದುಕೊಟ್ಟಿತು. ಅದಾಗ್ಯೂ ಅನೇಕ ತರಹದ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿರುವ ಸಿನಿಮಾದ ಸಾಲಿಗೆ ಇದೀಗ ಹೊಸದೊಂದು ಸೇರ್ಪಡೆಯಾಗಿದೆ. ಈ ಮೂಲಕ ಸಿನಿಮಾ ಇಂಡಸ್ಟ್ರಿಯಲ್ಲಿ ಕಾಂತಾರ ವಿಶೇಷ ಸ್ಥಾನವನ್ನು ಉಳಿಸಿಕೊಳ್ಳಲಿದೆ.

ಬೆಲ್ ಬಾಟಮ್ ಸಿನಿಮಾದಲ್ಲಿ ಯಶಸ್ವಿಯಾಗಿ ನಟಿಸಿದ್ದ ರಿಷಬ್ ಅನಂತರ ತಾವೇ ನಿರ್ದೇಶನ ಮಾಡಿಕೊಂಡು, ನಟನೆ ಮಾಡುವ ಮೂಲಕ ಕಾಂತಾರ ಸಿನಿಮಾ ನಿರ್ಮಾಣ ಮಾಡಿದರು. ಅದು ಅವರು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಾಗಿ ಸಕ್ಸಸ್ ಆಯಿತು. ಇದೀಗ ಅವರ ಶ್ರಮಕ್ಕೆ ತಕ್ಕಂತೆ ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್ ಶೆಟ್ಟಿಗೆ ಫಾಲ್ಕೆ ಪ್ರಶಸ್ತಿ ಲಭ್ಯವಾಗಿದೆ. ಇದನ್ನು ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ ಹೋಟರಲ್ ನಲ್ಲಿ ಪ್ರದಾನ ಸಮಾರಂಭ ನಡೆಯಲಿದೆ.

ಕಾಂತಾರ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆಯನ್ನು ಬರೆದಿದೆ. ಹೊಸ ದಾಖಲೆಯನ್ನು ‘ಕಾಂತಾರ’ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದ ಸಿನಿಮಾವು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ರೇಸ್‌ಗೆ ಎಂಟ್ರಿ ಪಡೆದುಕೊಂಡಿತ್ತು. ಈ ಸಿನಿಮಾದ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್, ಟ್ವಿಟರ್‌ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದರು. ‘ಕಾಂತಾರ ಚಿತ್ರವು ಎರಡು ಆಸ್ಕರ್ ವಿಭಾಗದಲ್ಲಿ ಭಾಗಿಯಾಗಲು ಅರ್ಹತೆ ಪಡೆದುಕೊಂಡಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ ಎಂದಿದ್ದರು. ಅದರ ನಡುವೆ ಇದೀಗ ಫಾಲ್ಕೆ ಪ್ರಶಸ್ತಿ ಪಡೆದಿದ್ದಾರೆ.




