HDK : ಕಾಂಗ್ರೆಸ್ ಭ್ರಷ್ಟಾಚಾರ ಆರೋಪ, ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತೆ : ಹೆಚ್ ಡಿಕೆ

ಹುಬ್ಬಳ್ಳಿ :ಫೆ.15: ವಿರೋಧ ಪಕ್ಷದ ನಾಯಕರ ಮೇಲೆ ಇನ್ನೂ ಎರಡು ತಿಂಗಳು ಐಟಿ ದಾಳಿ ನಡೆಯುವುದು ಸಾಮಾನ್ಯವಾಗಿರುತ್ತದೆ.‌ ಇದು ಯಾಕೆ ಅಂತಲೂ ಎಲ್ಲರಿಗೂ ಗೊತ್ತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಹುಬ್ಬಳ್ಳಿ ತಾಲೂಕಿನ ಹೆಬಸೂರನಲ್ಲಿ ಗ್ರಾಮದಲ್ಲಿ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಪ್ರಭಾಕರ್ ರೆಡ್ಡಿ ಒಬ್ಬ ಉದ್ಯಮಿ ಇದ್ದಾರೆ. ಇಂತಹ ಐಟಿ ದಾಳಿ ಸಾಮಾನ್ಯ ಅದು ಯಾಕೆ ಅಂತ ಗೊತ್ತು. ಇನ್ನೂ ಎರಡು ಮೂರು ತಿಂಗಳು ಇಂತಹ ಐಟಿ ದಾಳಿಗಳು ವಿರೋಧ ಪಕ್ಷದ ಮೇಲೆ ನಡೆಯುತ್ತವೆ. ಈ ಬಗ್ಗೆ ಜಾಸ್ತಿ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಧಾನಸಭಾ ಕಲಾಪದಲ್ಲಿ ಚರ್ಚೆ ತೌಡು ಕುಟ್ಟುವ ಕೆಲಸವಾಗುತ್ತಿದೆ. ಚರ್ಚೆ ಯಿಂದ ಏನು ಸಾಧ್ಯವಿಲ್ಲ. ಎಲ್ಲಾ ಭ್ರಷ್ಟಾಚಾರ ಆರೋಪಗಳಿಗೆ ದಾಖಲೆ ಒದಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತೆ. ಬಿಜೆಪಿಯವರು ಅವರ ಆತ್ಮ ಸಾಕ್ಷಿಗೆ ಉತ್ತರ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಸಾಮಾನ್ಯ. ಇದಕ್ಕೆ ದಾಖಲೆ ನೀಡಲ್ಲ. ನಾನು ಈ ಹಿಂದೆ ಭ್ರಷ್ಟಾಚಾರದ ಆರೋಪಗಳಿಗೆ ದಾಖಲೆ ನೀಡಿದ್ದೆ . ಆದರೆ ಆ ದಾಖಲೆಗಳಿಂದ ಕಾಂಗ್ರೆಸ್ ಅನುಕೂಲ ಮಾಡಿಕೊಂಡಿತು. ಕಾಂಗ್ರೆಸ್ ನಂಬಿದ್ರೆ ಅಕ್ಕಿನೂ ಸಿಗಲ್ಲ, ಹಕ್ಕಿನೂ ಸಿಗಲ್ಲ ಎಂದ ಹೆಚ್ ಡಿಕೆ, ಜನಾರ್ದನರೆಡ್ಡಿಯವರ ಪ್ರಾದೇಶಿಕ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿಗೆ ಹೊಡೆತ ನೀಡಬಹುದು ಆದರೆ ಕೆಪಿಪಿಯಿಂದ ಜೆಡಿಎಸ್ ಗೆ ಏನು ಆಗಲ್ಲ ಎಂದರು.

More News