Supari For The Murder of BJP MLA : ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ : ಇಬ್ಬರ ಬಂಧನ..!

ಬೆಂಗಳೂರು.ಫೆ.15: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಸತೀಶ್ ರೆಡ್ಡಿ ಆಪ್ತರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸ್ ಟೀಂ ದೂರು ಬಂದ ಕೂಡಲೇ ಅಲಾರ್ಟ್ ಆಗಿದ್ದು, ಶಾಸಕರ ಆಪ್ತರು ನೀಡಿದ ಮಾಹಿತಿ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಟೀಂ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು, ರಹಸ್ಯ ಸ್ಥಳದಲ್ಲಿ ವಶಕ್ಕೆ ಪಡೆದವರ ವಿಚಾರಣೆ ನಡೆಸಲಾಗಿದೆ. ಶಾಸಕ ಸತೀಶ್ ರೆಡ್ಡಿ ಬಿಜೆಪಿಯ ಪ್ರಭಾವಿ ಶಾಸಕರಾಗಿದ್ದರೆ, ಕಳೆದ ಹದಿನೈದು ದಿನದಿಂದ ಅಪರಿಚಿತ ಹುಡುಗರು ಅನುಮಾನಸ್ಪದವಾಗಿ ಕಾಣಿಸಿಕೊಂಡಿದ್ದರು. ಸತೀಶ್ ರೆಡ್ಡಿ ಮನೆ ಹಾಗೂ ಕಚೇರಿ ಬಳಿ ಅಪರಿಚಿತರಿಂದ ಚಾಲನೆ ನಡೆಯುತ್ತಿರುವುದು, ಶಾಸಕ ಸತೀಶ್ ರೆಡ್ಡಿ ಆಪ್ತರು ಈ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ.

More News