ಬೆಂಗಳೂರು :ಫೆ.20: ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳ ಜಡ ಜಗಳಕ್ಕೆ ಈಗ ಹೊಸ ಹೊಸ ಜನರ ಎಂಟ್ರಿಯಾಗುತ್ತಿದೆ. ಐಪಿಎಸ್, ಐಎಎಸ್ ಮಹಿಳಾ ಅಧಿಕಾರಿಗಳ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ನಿನ್ನೆ ಐಪಿಎಸ್ ಅಧಿಕಾರಿ ಡಿ.ರೂಪಾ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೇಲೆ 19 ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿ ಆರೋಪ ಮಾಡಿದ್ದರು.

ಅದಕ್ಕೀಗ ರೋಹಿಣಿ ಸಿಂಧೂರಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಗಳ ಮೂಲಕ ಪ್ರಶ್ನೆಗಳನ್ನು ಕೇಳಿ ಕೌಂಟರ್ ಕೊಟ್ಟಿದ್ದಾರೆ. ರೋಹಿಣಿ ಸಿಂಧೂರಿಯ ಅಭಿಮಾನಿಗಳು.. ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಸೋಷಿಯಲ್ ಮೀಡಿಯಾ ಖಾತೆ ಮೂಲಕ ಹ್ಯಾಷಟ್ಯಾಗ್ ಉತ್ತರ ಕೊಡಿ ರೂಪಾ ಅವರೇ (#UttaraKodiRoopaAvre) ಎಂದು 9 ಪ್ರಶ್ನೆಗಳು ಕೇಳಿದ್ದಾರೆ.

ರೋಹಿಣಿ ಸಿಂಧೂರಿಯ ಅಭಿಮಾನಿಗಳು ಕೇಳಿರಿವ 9 ಪ್ರಶ್ನೆಗಳ ಸಾರಾಂಶ
ರೋಹಿಣಿ ಅಭಿಮಾನಿಗಳ ಪ್ರಶ್ನೆ-1
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ RohiniSindhuri ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ?
ರೋಹಿಣಿ ಅಭಿಮಾನಿಗಳ ಪ್ರಶ್ನೆ-2
ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ?
ರೋಹಿಣಿ ಅಭಿಮಾನಿಗಳ ಪ್ರಶ್ನೆ-3
ತಮ್ಮ ಟ್ವೀಟ್’ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗುನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -4
ತಾವು ನಿನ್ನೆ ಮಾಧ್ಯಮದೊಂದಿಗೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -6
‘ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ??
ರೋಹಿಣಿ ಅಭಿಮಾನಿಗಳ ಪ್ರಶ್ನೆ -7
ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ? ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?
ರೋಹಿಣಿ ಅಭಿಮಾನಿಗಳ ಪ್ರಶ್ನೆ -8
ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ?
ರೋಹಿಣಿ ಅಭಿಮಾನಿಗಳ ಪ್ರಶ್ನೆ-9
ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ @CSofKarnataka ಹಾಗೂ @DgpKarnataka ರವರ ಗಮನಕ್ಕೆ ತರದೆ, WhastApp Screenshot ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ? ಉತ್ತರಕೊಡಿ ಡಿ.ರೂಪ ಅವ್ರೆ ಎಂದು ಪ್ರಶ್ನಿಸಿದ್ದಾರೆ..




