World Heritage : ಬೇಲೂರು-ಹಳೆಬೀಡು ವಿಶ್ವ ಪಾರಂಪರಿಕ ತಾಣ : ಸಿಎಂ ಬೊಮ್ಮಾಯಿ

ಹಾಸನ:ಫೆ.21: ಕಾಂಗ್ರೆಸ್ ನವರ ಬೂಟಾಟಿಕೆ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು ಮಾಡಿದ್ದಾರೆ. ಭ್ರಷ್ಟ ಕಾಂಗ್ರೆಸ್ಅನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಭಾಗವಹಿಸಿ ಮಾತನಾಡಿದ ಅವರು, ಹಾಸನ ಬಹಳ ವರ್ಷಗಳಿಂದ ಒಂದೇ ಪಕ್ಷದ ಹಿಡಿತದಲ್ಲಿದ್ದು, ಯಾವುದೇ ಅಭಿವೃದ್ಧಿಯಾಗುತ್ತಿಲ್ಲ.

ಬೇಲೂರು-ಹಳೆಬೀಡು ವಿಶ್ವ ಪಾರಂಪರಿಕ ತಾಣ

ಬೇಲೂರು ಶ್ರೀಚೆನ್ನಕೇಶವ ದೇಗುಲ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಅಧಿಕೃತ ಘೋಷಣೆಯಾದಲ್ಲಿ, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮಹತ್ವಯುತ ಕೊಡುಗೆ ನೀಡುವುದಲ್ಲದೇ, ಬೇಲೂರು ಹಳೇಬೀಡು ಪ್ರದೇಶದ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಬೇಲೂರಿನ ಶ್ರೀಚೆನ್ನಕೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಬೇಲೂರು ಶ್ರೀ ಚೆನ್ನಕೇಶವ ದೇಗುಲ ಕರ್ನಾಟಕದ ಹೆಮ್ಮೆಯಾಗಿದ್ದು, ಇಲ್ಲಿನ ಶಿಲ್ಪಕಲೆ ವಿಶ್ವದೆಲ್ಲೆಡೆ ಪ್ರಸಿದ್ಧಿ ಹೊಂದಿದೆ. ಬೇಲೂರು ಶ್ರೀ ಚೆನ್ನಕೇಶವ ದೇಗುಲವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಸಂಬಂಧಪಟ್ಟ ಇತಿಹಾಸ, ದಾಖಲೆಗಳನ್ನು ಈಗಾಗಲೇ ಸರ್ಕಾರ ಸಲ್ಲಿಸಿದೆ. ಕೆಲವೇ ತಿಂಗಳಲ್ಲಿ ಯುನೆಸ್ಕೊ ಪಟ್ಟಿಯಲ್ಲಿ ಸೇರಲಿದ್ದು, ಈ ತಾಣದಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಯಾಗುವ ಜೊತೆಗೆ ಹೆಚ್ಚಿನ ಅನುದಾನ ದೊರೆಯಲಿದೆ. ದೇಶ ವಿದೇಶಗಳಿಂದ ಭೇಟಿ ನೀಡುವ ಪ್ರವಾಸಿಗರು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದರು.

3 ವರ್ಷಗಳಿಂದ ಬಿಜೆಪಿ ಸರ್ಕಾರದ ಆಡಳಿತವನ್ನು ಜನರು ನೋಡಿದ್ದಾರೆ. ಹಲವು ವರ್ಷಗಳ ಸಮಸ್ಯೆಗಳನ್ನು ಕಗ್ಗಂಟಾಗಿಸಿ, ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸಲಾಗಿತ್ತು. ಈ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕಿದೆ. ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಲಿರುವ ವಿಶ್ವಾಸ ನಮಗಿದೆ ಎಂದಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಬೇಲೂರು ಅರಸೀಕೆರೆ ತಾಲ್ಲೂಕು ಕುಡಿಯುವ ನೀರು ಯೋಜನೆಗೆ ಅನುಮೋದನೆ

ಸಚಿವ ಸಂಪುಟ ಸಭೆಯಲ್ಲಿ ಬೇಲೂರು ಅರಸೀಕೆರೆ ತಾಲ್ಲೂಕಿಗೆ ಜಲಜೀವನ ಮಿಷನ್ ಅಡಿ ಕುಡಿಯುವ ನೀರು ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಬೇಲೂರಿನ ಅಭಿವೃದ್ಧಿಗೆ ಸರ್ಕಾರ ಬಹಳ ದೊಡ್ಡ ಕಾಣಿಕೆ ನೀಡಿದೆ ಎಂದು ಇದೇ ವೇಳೆ ಸಿಎಂ ತಿಳಿಸಿದ್ದಾರೆ.

More News