ಬೆಂಗಳೂರು : ಮಾಂಸ ತಿಂದು ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಬಿಜೆಪಿ ಶಾಸಕ ಸಿ ಟಿ ರವಿ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಇದುವರೆಗೂ ಕೇವಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳಿದ್ದರು ಎಂದು ಟೀಕಿಸುತ್ತಿದ್ದ ಬಿಜೆಪಿ ಶಾಸಕ ವರ್ತನೆ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
ಈ ಕುರಿತು ಜೆಡಿಎಸ್ ಟ್ವೀಟ್ ಮಾಡಿ ಇಂತಹ ಹೇಸಿಗೆ ರಾಜಕಾರಣಕ್ಕೆ ಅಂತ್ಯ ಎಂದು ಪ್ರಶ್ನಿಸಿದ್ದಾರಲ್ಲದೆ, ಅವರ ನಡೆಗೆ ವ್ಯಂಗ್ಯವಾಡಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ @CTRavi_BJP ಯವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದೆ. ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ?
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ @CTRavi_BJP ಯವರು ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ವರದಿಯಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದೆ. ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ?1/4 pic.twitter.com/Skn6I7hcdc
— Janata Dal Secular (@JanataDal_S) February 22, 2023
ತಲೆಗೆ ಸುರಿದ ನೀರು ಕಾಲಿಗೆ ಬರಲೇಬೇಕಲ್ಲ, ರವಿಯವರೆ! ಬರೀ ಇಂತಹ ಭಾವನಾತ್ಮಕ ವಿಷಯಗಳನ್ನು ಇಟ್ಟುಕೊಂಡು ಮುಖ್ಯ ಸಂಗತಿಗಳಿಂದ ಜನರನ್ನು ವಿಮುಖರನ್ನಾಗಿಸುತ್ತಿದ್ದ ಬಿಜೆಪಿಯ ‘ಹುರಿಯಾಳು’ ಈ ಪರಿಸ್ಥಿತಿಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಏನು ಹೇಳುತ್ತಿದೆ? ‘ಆಚಾರ ಹೇಳೋಕೆ, ಬದನೆಕಾಯಿ ತಿನ್ನೋಕೆ’, ಎಂಬಂತಾಗಲಿಲ್ಲವೆ?
ಅಂದಹಾಗೆ, ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ.
ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ ಪಾಪ ಎಂದೆನಿಸುತ್ತಷ್ಟೆ!




