PM Modi: ಬಿಎಸ್ ವೈ ವಿದಾಯ ಭಾಷಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಅಧಿವೇಶನ, ಇನ್ಮುಂದೆ ಚುನಾವಣೆಗೂ ಸ್ಪರ್ಧಿಸಲ್ಲ ಎಂದು ಹೇಳಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಎರಡು ದಿನಗಳ ಹಿಂದೆ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದು ನನ್ನ ಕೊನೆಯ ಅಧಿವೇಶನ ಹಾಗೂ ಭಾಷಣ ಎಂದು ಭಾವುಕರಾಗಿ ನುಡಿದಿದ್ದರು.

ಈ ಮಾತುಗಳನ್ನು ಕೇಳಿಸಿಕೊಂಡಿರುವ ಪ್ರಧಾನಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಬಿಜೆಪಿ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಫೂರ್ತಿ, ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಗಿದೆ. ಈ ಭಾಷಣ ನಮ್ಮ ಕಾರ್ಯಕರ್ತರಿಗೆ ಖಂಡಿತವಾಗಿಯೂ ಸ್ಪೂರ್ತಿಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

More News