ಬೆಂಗಳೂರು,ಫೆ.24: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮಧ್ಯಪ್ರದೇಶದ ಸಾತ್ನಾ ಜಿಲ್ಲೆಗೆ ಪ್ರಯಾಣ ಬೆಳೆಸಿದರು.

ಶ್ರೀ ಅಮಿತ್ ಷಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಡಿ ಜಿ & ಐ ಜಿಪಿ, ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹೆಚ್ ಎ ಎಲ್ ನ ಹಿರಿಯ ಅಧಿಕಾರಿಗಳು ಇನ್ನಿತರರು ಇದ್ದರು.




