ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶಿವಮೊಗ್ಗದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಜನ ಸೇರಿಸಲು ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಿದ್ದು, ಅನೇಕ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿಯು ಆದೇಶ ನೀಡಿದ್ದು, ಎಂಜಿನಿಯರಿಂಗ್, ವಾಣಿಜ್ಯ, ಫಾರ್ಮಸಿ, ಕಾನೂನು, ಸೈನ್ಸ್ ಮತ್ತು ಸ್ನಾತಕೋತ್ತರ ಕಾಲೇಜುಗಳಿಗೆ ಲಿಖಿತ ಆದೇಶ ನೀಡಿದ್ದು, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಸೂಚನೆ ನೀಡಿದೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಒಡೆತನದ ಕಾಲೇಜುಗಳಿಗೂ ಇದೇ ರೀತಿಯ ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕಳುಹಿಸುವಂತೆ ಸಂದೇಶ ರವಾನೆ ಮಾಡಲಾಗಿದೆ. ಸರ್ಕಾರಿ ಕಾರ್ಯಕ್ರಮಕ್ಕೆ ಜನ ಸೇರಿಸಲು ಬಿಜೆಪಿ ನಾಯಕರು ಆಯ್ಕೆ ಮಾಡಿಕೊಂಡಿರುವ ಈ ಮಾರ್ಗಕ್ಕೆ ಹಲವಾರು ಪೋಷಕರು ಮತ್ತು ಶಿಕ್ಷಣ ತಜ್ಞರು ಟೀಕಿಸಿದ್ದು, ರಾಷ್ಟ್ರೀಯ ಪಕ್ಷವೊಂದಕ್ಕೆ ಇಂತಹ ದಯನೀಯ ಸ್ಥಿತಿ ಬಂದೋದಗಬಾರದಿತ್ತು ಎಂದು ಆರೋಪಿಸಿದ್ದಾರೆ.
#PRIME MINISTER NARENDRA MODI #PMMODI #RALLY #SHIVAMOGGA #B S YEDIYURAPPA #CMBOMMAI #CHIEF MINISTER #BASAVARAJ BOMMAI #COLLEGE STUDENT #PARTICIPATE