ಬೆಂಗಳೂರು : ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಒಂದೆಡೆ ದಿನನಿತ್ಯ ಬಳಸುವ ಆಹಾರ ಧಾನ್ಯಗಳ ಬೆಲೆ ಏರಿಕೆಯಾದರೆ, ಇನ್ನೊಂದೆಡೆ ಇಂದು ಗ್ಯಾಸ್ ಬೆಲೆ 50 ರೂಪಾಯಿ ಏರಿಕೆ ಕಂಡಿದೆ. ಇದರಿಂದ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವೊಂದಕ್ಕೆ 1100 ರೂಪಾಯಿಗೆ ಏರಿಕೆ ಕಂಡಿದೆ.
ಹಾಗೆಯೇ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ವೊಂದಕ್ಕೆ 350.50 ರೂಪಾಯಿಯನ್ನು ಏರಿಕೆ ಕಂಡಿದ್ದು, ಇದರಿಂದ ಗಗನಕುಸುಮವಾಗಿರುವ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಇನ್ನಷ್ಟು ದುಪ್ಪಟ್ಟಾಗಲಿದೆ.
ಬೆಲೆ ಏರಿಕೆಯ ಬಿಸಿ ಮತ್ತೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗೆ 50 ರೂಪಾಯಿ, ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಗೆ 350.50 ರೂಪಾಯಿಗೆ ಹೆಚ್ಚಳವಾಗಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ದೇಶದ ಆರ್ಥಿಕತೆಗೆ ಕಷ್ಟದಲ್ಲಿರುವಾಗ, ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ?1/4 pic.twitter.com/ICg3qTMVOA
— Janata Dal Secular (@JanataDal_S) March 1, 2023
ಈ ಕುರಿತು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರದ ಜನಸಾಮಾನ್ಯರಿಗೆ ನೀಡಿದ ಕೊಡುಗೆಯಾಗಿದೆ ಎಂದು ಟೀಕಿಸಿವೆ. ಕೇಂದ್ರ ಬಿಜೆಪಿ ಸರ್ಕಾರ ಯಾರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಈ ಕುರಿತು ಜೆಡಿಎಸ್ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದು, ಜನರು ಸೌದೆ ಒಲೆ ಬಳಕೆ ಮಾಡುವುದು ಸೂಕ್ತ ಎಂದು ಕಿಡಿಕಾರಿದೆ.
ಬೆಲೆ ಏರಿಕೆಯ ಬಿಸಿ ಮತ್ತೆ ದೇಶದ ಜನತೆಯನ್ನು ಸಂಕಷ್ಟಕ್ಕೆ ದೂಡಲಿದೆ. ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗೆ 50 ರೂಪಾಯಿ, ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಗೆ 350.50 ರೂಪಾಯಿಗೆ ಹೆಚ್ಚಳವಾಗಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ದೇಶದ ಆರ್ಥಿಕತೆಗೆ ಕಷ್ಟದಲ್ಲಿರುವಾಗ, ಜನತೆಯ ಜೇಬಿಗೆ ಕತ್ತರಿ ಎಷ್ಟು ಸರಿ?
ಈಗಾಗಲೇ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸಬ್ಸಿಡಿ ನಿಂತಿರುವುದರಿಂದ ಗ್ರಾಮೀಣ ಭಾಗದ ಬಹಳಷ್ಟು ಮಹಿಳೆಯರು ಗ್ಯಾಸ್ ಸಿಲಿಂಡರ್ ಕೊಳ್ಳದೆ, ಮತ್ತೆ ಸೌದೆ ಬಳಕೆಗೆ ಹಿಂದಿರುಗಿದ್ದಾರೆ. ಇದೆ ವೇಳೆ ಮತ್ತೆ ಗೃಹ ಬಳಕೆಯ ಸಿಲಿಂಡರ್ ಬೆಲೆ ಏಕಾಏಕಿ ಏರಿಸಿದರೆ ಹೇಗೆ? ಕೇಂದ್ರ @BJP4India ಸರ್ಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ?

ದೇಶದ ಜನರು ಹಣದುಬ್ಬರದಿಂದ ತತ್ತರಿಸುತ್ತಿದ್ದರೆ, ಪ್ರಧಾನಿ ಮೋದಿ ಮತ್ತವರ ಸಂಪುಟ ರಾಜ್ಯ ಚುನಾವಣೆಗಳಿಗಾಗಿ ಸುತ್ತುತ್ತಿದ್ದಾರೆ. ನಮ್ಮ ರಾಜ್ಯದ @BJP4Karnataka ಸರ್ಕಾರಕ್ಕಂತೂ ಮಾನ-ಮರ್ಯಾದೆ ಇಲ್ಲ. ತಮ್ಮದೇ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕಾರಣ ಎಲ್ಲವನ್ನೂ ಸಮರ್ಥಿಸುವ ಲಜ್ಜೆಗೇಡಿತನಕ್ಕೆ ಇಳಿದಿದ್ದಾರೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಷ್ಟು ದೊಡ್ಡದಾಗಿ ಏರಿಸಿದರೆ ನಾಳೆ ಹೊಟೇಲ್, ರೆಸ್ಟೋರೆಂಟ್ ಗಳ ಪರಿಸ್ಥಿತಿ ಏನಾಗಬಹುದು? ಇಲ್ಲೆಲ್ಲ ಕೆಲಸ ಮಾಡುವ ಲಕ್ಷಾಂತರ ಮಂದಿಯ ಉದ್ಯೋಗದ ಗತಿ ಏನು? ಆಹಾರದ ಬೆಲೆ ಆಕಾಶದೆತ್ತರಕ್ಕೆ ಏರಿದರೆ ಜನಸಾಮಾನ್ಯರ ಪಾಡೇನು? ಸುಳ್ಳುಗಳನ್ನೇ ಹೇಳುತ್ತಾ ಜನರ ಬದುಕು ನಿರ್ನಾಮ ಮಾಡಲಾಗುತ್ತಿದೆ.
#GAS CYLINDER #PRICE HIKE #DOMESTIC GAS CYLINDER #COMMERCIAL GAS CYLINDER #BJP4INDIA #BJP4KARNATAKA




