ಕಲಬುರಗಿ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ನಾಲ್ಕು ಅಥವಾ ಐದು ಹಾಲಿ ಶಾಸಕರಿಗೆ ಟಿಕೇಟ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸುತ್ತಿದ್ದಂತೆಯೇ ಹಲವು ಶಾಸಕರ ಎದೆಬಡಿತ ಏರಿಕೆಯಾಗಿದೆ. ಇನ್ನು ಹಲವರು ಟೆನ್ಸನ್ ಗೊಳಗಾಗಿದ್ದಾರೆ. ಪಕ್ಷದ ಹೈಕಮಾಂಡ್ ನಾಲ್ಕು ಅಥವಾ ಆರು ಹಾಲಿ ಶಾಸಕರನ್ನು ಬಿಟ್ಟು ಉಳಿದೆಲ್ಲಾ ಶಾಸಕರಿಗೆ ಟೀಕೆಟ್ ನೀಡಲು ನಿರ್ಧರಿಸಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಬಿಜೆಪಿ ಪಕ್ಷದಿಂದ ಹೊರಗೆ ಹೋಗುವವರಿಗೆ ಸಂತೋಷದಿಂದ ಕಳುಹಿಸುತ್ತೆವೆ ಮತ್ತು ನಮ್ಮ ಪಕ್ಷಕ್ಕೆ ತಾವೇ ಬಂದರೆ ಅವರನ್ನು ಸ್ವಾಗತ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಪುತ್ರನಿಗೆ ಕರ್ಮಭೂಮಿ?
ತಮ್ಮ ಕರ್ಮಭೂಮಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಪುತ್ರ ಬಿ ವೈ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕವಾಗಿ ಅಲ್ಲಿಯೇ ಸ್ಪರ್ಧೆ ಮಾಡಲಿದ್ದಾರೆ. ಆದರೆ, ಹೈಕಮಾಂಡ್ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹೈಕಮಾಂಡ್ ವಿಜಯೇಂದ್ರ ಅವರಿಗೆ ಎಲ್ಲಿ ಸ್ಪರ್ಧಿಸಲು ಸೂಚಿಸುತ್ತೋ ಅಲ್ಲಿ ಅವರು ಸ್ಪರ್ಧಿಸಲಿದ್ದಾರೆ ಎಂದು ನಂತರ ಸಮಾಜಾಯಿಸಿ ನೀಡಿದರು.




