ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಿ ಅನೇಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಭರ್ಜರಿ ರೋಡ್ ಶೋ ನಡೆಸಿದರು.
ಆದರೆ, ಅವರು ಇಂದು ಒಬ್ಬ ರೌಡಿಯ ಮುಂದೆ ಕೈ ಮುಗಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಪ್ರಧಾನಿಯಾಗಿದ್ದವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿರುವ ರೌಡಿ ಶೀಟರ್ ಫೈಟರ್ ರವಿ ಮುಂದೆ ಕೈ ಜೋಡಿಸಿ ನಮಸ್ಕರಿಸಿರುವುದು ಮಾತ್ರ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.
— Karnataka Congress (@INCKarnataka) March 12, 2023
ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.
ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು. pic.twitter.com/BOcpzumtHm
ಈ ಕುರಿತು ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಯಿಸಿದ್ದು, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ.
ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ @narendramodi ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ.
ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟ್ವೀಟ್ ನಲ್ಲಿ ಕಿಡಿಕಾರಿದೆ.
ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶಕ್ಕೆ ಪ್ರಧಾನಿ ಅವರು ಇಂತಹ ರೌಡಿ ಶೀಟರ್ ಗೆ ಕೈ ಮುಗಿದಿರುವುದು ಸರಿಯಲ್ಲ. ಆದರೆ ಪ್ರಧಾನಿ ಅವರಿಗೆ ಇದು ತಿಳಿದಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇನ್ನಿತರರಿಗೆ ಆತನ ಇತಿಹಾಸ ಗೊತ್ತಿದ್ದರೂ ಅವರನ್ನು ಪ್ರಧಾನಿ ಮುಂದೆ ನಿಲ್ಲಿಸಿರುವುದು ಸರಿಯಲ್ಲ ಎಂಬ ಆಕ್ರೋಶ ಜನಸಾಮಾನ್ಯರಲ್ಲಿ ವ್ಯಕ್ತವಾಗಿದೆ.
#BJP4INDIA #BJP4KARNATAKA #PMNARENDRAMODI #PMMODI #ROWDY SHEETER #BJP #CONGRESS #AMIT SHAH #NARENDRA MODI #FIGHTER RAVI




