ಚಾಮರಾಜನಗರ: ನಾನು ಡೈರೆಕ್ಟ್ ರಾಜಕಾರಣಿ, ಅವೆಲ್ಲಾ ಮುಗಿದ ಅಧ್ಯಾಯ ಎಂದು ಮಾ.27 ಕ್ಕೆ ಸೋಮಣ್ಣ ಕಾಂಗ್ರೆಸ್ ಗೆ ಸೇರುತ್ತಾರೆ ಎಂಬ ಪೋಸ್ಟ್ ಹರಿದಾಡುತ್ತಿರುವ ಬಗ್ಗೆ ಸಚಿವ ಸೋಮಣ್ಣ ಸ್ಪಷ್ಟನೆ ನಿಡಿದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಎರಡು ತಿಂಗಳಿನಿಂದ ನನ್ನನ್ನು ಉಜ್ಜುತ್ತಿದ್ದೀರಾ, ಇನ್ನು ಎಷ್ಟು ಬೇಕಾದ್ರೂ ಹಾಕಿಕೊಳ್ಳಿ ಅವೆಲ್ಲಾ ನನ್ನ ತಲೆಯಲ್ಲೇ ಇಲ್ಲಾ, ನಾನೋರ್ವ ಡೈರೆಕ್ಟ್ ರಾಜಕಾರಣಿ ನೇರವಾಗಿ ಮಾತನಾಡುವನು, ಈಗಾಗಲೇ ಅದರ ಬಗ್ಗೆ ಹೇಳುವುದನ್ನೆಲ್ಲಾ ಹೇಳಿದ್ದೇನೆ, ಅವೆಲ್ಲಾ ಮುಗಿದ ಅಧ್ಯಾಯ, ಇನ್ನು ಈ ವಿಚಾರಗಳಿಗೆ ಉತ್ತರಿಸಲ್ಲ ಎಂದರು.
ಇನ್ನು, ಚಾಮರಾಜನಗರ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ರಾಜ್ಯದ 224 ಕ್ಷೇತ್ರಗಳಲ್ಲಿ ಸೋಮಣ್ಣಗೆ ಹಲವಾರು ಕ್ಷೇತ್ರ ಪರಿಚಯ ಇದೆ, ಚಿಕ್ಕಂದಿನಿಂದಲೂ ಚಾಮರಾಜನಗರದ ಬಗ್ಗೆ ವಿಶೇಷ ಪ್ರೀತಿ ಅಷ್ಟೇ, ಎಲ್ಲವೂ ಪಾರ್ಟಿಯ ತೀರ್ಮಾನ ಎಂದರು.




