Chetan Ahimsa Arrest: ನಟ ಚೇತನ್ ಅಹಿಂಸಾ ಅರೆಸ್ಟ್: ಜಾಮೀನು ಅರ್ಜಿ ವಜಾಗೊಳಿಸಿ 14 ದಿನ ನ್ಯಾಯಾಂಗ ಬಂಧನ ಆದೇಶ

ಬೆಂಗಳೂರು: ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂಬ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಚೇತನ್ ರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ನಟ ಚೇತನ್ ರ ಆಕ್ಷೇಪಾರ್ಹ ಪೋಸ್ಟ್ ಹಿನ್ನಲೆಯಲ್ಲಿ ಶಿವಕುಮಾರ್ ಎಂಬುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ನಟ ಚೇತನ್ ಟ್ವೀಟ್ ಮಾಡಿದ ವಿಚಾರವೇನು..?

ಉರಿಗೌಡ ನಂಜೇಗೌಡ ಕುರಿತು ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದ ಅವರು, ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಹೇಳಿಕೆ ನೀಡಿದ್ದು, ಹಿಂದೂಪರ ಸಂಘಟನೆಗಳ ಕೆಂಗಟ್ಟಿಗೆ ಗುರಿಯಾಗಿದೆ.
ಸಾರ್ವರ್ಕರ್ ಹೇಳುತ್ತಾರೆ ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಒಂದು ಸುಳ್ಳು. ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಎಂಬುದೂ ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ ಎಂದು ಬರೆದುಕೊಂಡಿದ್ದಾರೆ.

ಚೇತನ್ ಪೋಸ್ಟ್ ನಿಂದ ಸಿಟ್ಟಾದ ಶಿವಕುಮಾರ್ ಎಂಬುವರು ನಟನ ವಿರುದ್ಧ ದೂರು ನೀಡಿದ್ದು, ಚೇತನ್ ಅವರು ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ ಎಂದು ದೂರು ನೀಡಿದ್ದು, ಬಂಧಿಸಲಾಗಿದೆ. ಇನ್ನು ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

More News