ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನ ಸೆಳೆಯುವ ನಿಟ್ಟಿನಲ್ಲಿ ತಮ್ಮದೇ ರಣತಂತ್ರ ರೂಪಿಸುತ್ತಿವೆ. ಈ ನಡುವೆ ಮೈಸೂರಿನ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿರುವ ನರಸಿಂಹರಾಜ ಕ್ಷೇತ್ರದಲ್ಲಿ ವಿಜಯ ಪತಾಕೆ ಹಾರಿಸಲು ಜೆಡಿಎಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ. ನರಸಿಂಹರಾಜ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಇಲ್ಲಿ ಈ ಬಾರಿ ಜೆಡಿಎಸ್ ಬಾವುಟ ಹಾರಿಸಲು ತೆನೆ ನಾಯಕರು ಕಣ್ಣಿಟ್ಟಿದ್ದಾರೆ.
ಇದಕ್ಕಾಗಿ ಮೈಸೂರು ಚುನಾವಣ ಅಖಾಡಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಎಂಟ್ರಿ ಕೊಡುತ್ತಾರೆ ಎನ್ನಲಾಗುತ್ತಿದ್ದು, ಎನ್.ಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎನ್ನಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸಂಚಲನ ಮೂಡಿಸಿರುವ ಈ ವಿಷಯ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತಂದಿದೆ.

ಎನ್‌ಆರ್ ಕ್ಷೇತ್ರದ ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಈಗಾಗಲೇ ಚುನಾವಣೆ ತಯಾರಿ ಆರಂಭಿಸಿದ್ದರೆ. ಕೈ ನಾಯಕರ ಲೆಕ್ಕಾಚಾರವನ್ನ ತಲೆಕೆಳಗಾಗಿಸುವ ತವಕದೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ಕಣಕ್ಕಿಳಿಸುತ್ತಿದೆ. ಇದೇ ಕಾರಣದಿಂದಾಗಿ ಸಿಎಂ ಇಬ್ರಾಹಿಂ ಕಳೆದ ಆರು ತಿಂಗಳಿನಿಂದ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.
ಅಲ್ಲದೇ ಜೆಡಿಎಸ್ ಕಾರ್ಯಕರ್ತರು, ಆಪ್ತರೊಂದಿಗೆ ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿದ್ದ ಸಿಎಂ ಇಬ್ರಾಹಿಂ. ಮಾಜಿ ಸಿಎಂ ಸಿದ್ದರಾಮಯ್ಯರ ಮೇಲೆ ಮುನಿಸಿಕೊಂಡು ಕಾಂಗ್ರೆಸ್ ತೊರೆದಿದ್ದ ಇಬ್ರಾಹಿಂ, ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವ ಮೂಲಕ ಮಾಜಿ ಸಿಎಂಗೆ ಅವರದ್ದೇ ಜಿಲ್ಲೆಯಲ್ಲಿ ಶಾಕ್ ಕೊಡುವ ಲೆಕ್ಕಾಚಾರದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತನ್ವೀರ್ ಸೇಠ್ ವಿರುದ್ಧ ತೊಡೆತಟ್ಟಿ ನಿಂತಿರುವ ಸಿಎಂ ಇಬ್ರಾಹಿಂ, ಈಗಾಗಲೇ ಕ್ಷೇತ್ರದ ಜೆಡಿಎಸ್ ಕಾರ್ಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಎನ್.ಆರ್. ಕ್ಷೇತ್ರದ ಜೆಡಿಎಸ್ ಮುಖಂಡ ಹಾಗೂ ಟಿಕೆಟ್ ಆಕಾಂಕ್ಷಿಯಾಗಿರುವ ಅಬ್ದುಲ್ ಅಜೀಜ್, ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಜೆಡಿಎಸ್ ಪ್ಲಾನ್ ಮಾಡಿದೆ. ಮುಸ್ಲಿಂ ಸಮುದಾಯದ ಮತದಾರರಿಗೆ ಗಾಳ ಹಾಕಲು ಮುಂದಾಗಿದ್ದಾರೆ.
#CMIBRAHIM #MYSORE #NARASHIMRAJACONSTITUENCY #ASSEMBLYELECTION #THANVIR SHET #CONGRESS #JDS #FIGHT




