CM Bommai: ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಕಾನೂನಿನ ಕ್ರಮ : ಸಿಎಂ ಬೊಮ್ಮಾಯಿ

ಬೆಳಗಾವಿ,ಮಾರ್ಚ್ 28: ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ . ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ.ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕೆ ನಾವು ಸೊಪ್ಪು ಹಾಕುವುದಿಲ್ಲ.

ಬಿಜೆಪಿ ಪಟ್ಟಿ ಬಹುತೇಕವಾಗಿ ಏಪ್ರಿಲ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದರು. ಕಳೆದ 2-3 ದಿನಗಳಿಂದ ನಮ್ಮ ಶಾಸಕರಿಗೆ ಫೋನ್ ಮಾಡಿ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಬಳಿ ಸರಿಯಾದ ಅಭ್ಯರ್ಥಿ ಇಲ್ಲದೆ ಹತಾಶರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷದವರಿಗೆ ಫೋನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ದಿವಾಲಿಯಾಗಿದೆ ಎಂದು ಇದರಿಂದಾಗಿ ಸ್ಪಷ್ಟವಾಗುತ್ತದೆ ಎಂದರು.

More News