ನವದೆಹಲಿ- ಎರಡು ದಿನಗಳ ನವದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿ ಅವರು ಅಮಿತ್ ಷಾ ಅವರನ್ನು ಎರಡನ ಬಾರಿ ಭೇಟಿ ಮಾಡಿ ಸುದೀರ್ಘವಾಗಿ ಚರ್ಚೆ ನಡೆಸಿದರು. ಪ್ರಮುಖ ಖಾತೆಗಾಗಿ ಅನೇಕ ಸಚಿವರು ಇಟ್ಟಿರುವ ಬೇಡಿಕೆ, ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಸ್ಥಾನ ಭರ್ತಿ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.